ಕುಂದಾಪುರ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಇ – ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಅವರನ್ನು ಕರ್ತವ್ಯದಲ್ಲಿ ಮುಂದುವರಿಸಲು ಶಾಸಕರ ಮನವಿಗೆ ಸ್ಪಂದನೆ

0
491

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಇಡೀ ರಾಜ್ಯದಲ್ಲಿ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳನ್ನ ಕಡಿತಗೊಳಿಸುತ್ತಿರುವುದು ವಿಚಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಗಮನಕ್ಕೆ ಬಂದ ನಂತರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ್ದು ಕುಂದಾಪುರ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದ 5ಜನ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಸುವ ಬಗ್ಗೆ ಕೋರಿಕೆ ಸಲ್ಲಿಸಿದ್ದು. ಇದಕ್ಕೆ ಪೂರಕವಾಗಿ ಸ್ಪಂದನೆ ನೀಡಿದ ಸಚಿವರು ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯಾವುದೇ ಸಿಬ್ಬಂದಿಯನ್ನ ಕಡಿತಗೊಳಿಸಿದಂತೆ ಇಲಾಖೆಗೆ ಸೂಚನೆ ನೀಡಿರುತ್ತಾರೆ. ಅದರಂತೆ ಎಲ್ಲಾ ಸಿಬ್ಬಂದಿಗಳು ತಮ್ಮ ಕರ್ತವ್ಯದಲ್ಲಿ ಮುಂದುವರೆಯಲು ಅವಕಾಶವನ್ನು ಕಲ್ಪಿಸಲಾಗಿದೆ.

Click Here

LEAVE A REPLY

Please enter your comment!
Please enter your name here