ಬೈಂದೂರು: ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ, ಪ್ರತಿಭಟನೆ – ಬಿಜೆಪಿ ನೈತಿಕತೆ ಪ್ರಶ್ನಿಸಿದ ಕಾಂಗ್ರೇಸ್

0
276

ಕುಂದಾಪುರ ಮಿರರ್ ಸುದ್ದಿ…

ಬೈಂದೂರು: ಕಳೆದ 11 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರವು ಪೆಟ್ರೋಲಿಯಂ ವಸ್ತುಗಳ ಬೆಲೆ ಏರಿಕೆ ಮಾಡಿರುವುದಲ್ಲದೇ ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ ಹೇರಿರುವುದರಿಂದ ಸಹಜವಾಗಿ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ದೆಶದ ಜನ ಸಂಕಷ್ಟಕ್ಕೀಡಾಗಿದ್ದಾರೆ. ಆದರೆ ಬಿಜೆಪಿ ಜನರ ಕಷ್ಟಕ್ಕೆ ಪರಿಹಾರ ನೀಡುವ ಬದಲು ಮೊಸಳೆ ಕಣ್ಣೀರು ಸುರಿಸುತ್ತಿದೆ. ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರದ ಬೆಲೆ ಏರಿಕೆಯನ್ನು ಪ್ರಶ್ನಿಸುವ ತಾಕತ್ತು ರಾಜ್ಯದ ಯಾವ ಬಿಜೆಪಿಯ ನಾಯಕರಿಗೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಗುಡುಗಿದ್ದಾರೆ.

Click Here

Click Here

ಅವರು ಮಂಗಳವಾರ ಯೆಡ್ತರೆಯ ಜೆಎನ್ಆರ್ ಕಲಾಮಂದಿರದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಬೈಂದೂರು ವಿಧಾನಸಭಾ ಕ್ಷೇತ್ರದ ವತಿಯಿಂದ ನಡೆದ ಗಾಂಧಿ ಭಾರತ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ನಡೆದ ಜನಾಕ್ರೋಶ, ಪ್ರತಿಭಟನೆ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಮಾತನಾಡಿ, ರಾಜ್ಯದ ಕಾಂಗ್ರೇಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದು ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ರಾಜ್ಯದ ಸಾಮಾನ್ಯ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಇದನ್ನು ಸಹಿಸದ ಬಿಜೆಪಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ, ಅವರಿಗೆ ಬಡವರಿಗೆ ಸವಲತ್ತು ಕಲ್ಪಿಸುವುದು ಬೇಕಾಗಿಲ್ಲ, ಹಿಂದೂತ್ವದ ಹೆಸರಿನಲ್ಲಿ ರಾಜಕಾರಣ ಮಾಡುವುದೇ ಅವರಿಗೆ ಚಾಳಿಯಾಗಿದೆ ಎಂದು ಕಿಡಿಕಾರಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದರು. ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ಕುಂದಾಪುರದ ದಿನೇಶ್ ಹೆಗ್ಡೆ, ಮುನಿಯಾಲು ಉದಯ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಎಂ.ಎ. ಗಪೂರ್, ಎಸ್. ರಾಜು ಪೂಜಾರಿ, ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ, ದಿನಕರ ಹೇರೂರು, ಎಂ. ಜಿ. ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕೃಷ್ಣಯ್ಯ ಶೆಟ್ಟಿ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ಸಿನ ಎಲ್ಲಾ ಘಟಕದ ಪದಾಕಾರಿಗಳು ಉಪಸ್ಥಿತರಿದ್ದರು.

ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಪ್ರಾಸ್ತಾವಿಸಿ ಮಾತನಾಡಿದರು. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪ್ರಸನ್ನಕುಮಾರ ಶೆಟ್ಟಿ ನಿರೂಪಿಸಿದರು. ಎಸ್. ಪ್ರಕಾಶ್ಚಂದ್ರ ಶೆಟ್ಟಿ ವಂದಿಸಿದರು.

Click Here

LEAVE A REPLY

Please enter your comment!
Please enter your name here