ಬೇಸಿಗೆ ಶಿಬಿರದಿಂದ ಮಕ್ಕಳ ಜ್ಞಾನ ವೃದ್ಧಿ – ಚಂದ್ರಮೋಹನ್ ಪೂಜಾರಿ
ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮಕ್ಕಳ ಮನೋವಿಕಾಸಕ್ಕೆ ಬೇಸಿಗೆ ಶಿಬಿರಗಳು ಸಹಕಾರಿಯಾಗುತ್ತದೆ. ಈ ಹಿನ್ನಲೆ ಸ್ಥಳೀಯ ಮಕ್ಕಳು ಇದರ ಪ್ರಯೋಜನವನ್ನು ಅಗತ್ಯವಾಗಿ ಪಡೆದುಕೊಳ್ಳಬೇಕು ಎಂದು ಪಾಂಡೇಶ್ವರ ಗ್ರಾಮಪಂಚಾಯತ್ ಸದಸ್ಯ ಚಂದ್ರಮೋಹನ್ ಪೂಜಾರಿ ಅಭಿಪ್ರಾಯಪಟ್ಟರು.
ಗುರುವಾರ ಪಾಂಡೇಶ್ವರ ಗ್ರಾಮಪಂಚಾಯತ್ ಹಾಗೂ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಇವರುಗಳ ಸಹಭಾಗಿತ್ವದಡಿ15ರಿಂದ 21ರ ತನಕ ನಡೆಯಲಿರುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಾತನಾಡಿ ಶಿಬಿರಗಳು ಜ್ಞಾನ ವೃದ್ಧಿಗೆ ಸೀಮಿತಗೊಳ್ಳದೆ ವಿವಿಧ ಕಲಾಪ್ರಕಾರಗಳ ಜೊತೆಗೆ ಸಂಸ್ಕಾರಭರಿತ ಜೀವನಕ್ಕೆ ಮುನ್ನುಡಿ ಬರೆಯಲಿದೆ ಎಂದರು.
ಕಾರ್ಯಕ್ರಮವನ್ನು ಪಾಂಡೇಶ್ವರ ಗ್ರಾ.ಪಂ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಅರ್ಪಿತಾ ಬ್ರಹ್ಮಾವರ ಭಾಗವಹಿಸಿದರು.
ಮುಖ್ಯ ಅಭ್ಯಾಗತರಾಗಿ ಪಂಚಾಯತ್ ಉಪಾಧ್ಯಕ್ಷ ವೈ ಬಿ ರಾಘವೇಂದ್ರ, ಅಭಿವೃದ್ಧಿ ಅಧಿಕಾರಿ ಲೋಲಾಕ್ಷಿ, ಸದಸ್ಯರಾದ ಸಿಲ್ವೆಸ್ಟರ್ ಡಿಸೋಜ, ಸಂಧ್ಯಾ ರಾವ್, ಸಂಜೀವಿನಿ ಒಕ್ಕೂಟದ ಎಂಬಿಕೆ ಉಷಾ ಗಣೇಶ್ ಪೂಜಾರಿ, ವಿಆರ್ ಡಬ್ಲ್ಯೂ ಶಾಂತಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಗ್ರಂಥಪಾಲಕಿ ಜ್ಯೋತಿ ಪೂಜಾರಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.











