ಕುಂದಾಪುರ: ವೃತ್ತ ನಿರೀಕ್ಷಕ ನಂಜಪ್ಪ ಎನ್ ಅನಾರೋಗ್ಯದಿಂದ ಸಾ*ವು

0
788

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಇಲ್ಲಿನ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ನಂಜಪ್ಪ ಎನ್ (59) ಅವರು ಅನಾರೋಗ್ಯದಿಂದ ಬುಧವಾರ ತಡರಾತ್ರಿ ಸಾವನ್ನಪ್ಪಿದ್ದಾರೆ.

Click Here

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಂಜಪ್ಪ ಅವರು ಎರಡು ದಿನಗಳ ಹಿಂದೆ ಉಡುಪಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ

2024ರ ಆಗಸ್ಟ್ 27 ರಂದು ಕುಂದಾಪುರ ವೃತ್ತ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದ ನಂಜಪ್ಪ ಅವರು, ಕುಂದಾಪುರದಲ್ಲಿ 9 ತಿಂಗಳುಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು, ಬಳಿಕ ಪೊಲೀಸ್ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿ ಯಲ್ಲಿ ಹಾಗೂ ನಾಲ್ಕು ವರ್ಷಗಳ ಕಾಲ ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Click Here

LEAVE A REPLY

Please enter your comment!
Please enter your name here