ಕುಂದಾಪುರ :ಧಾರ್ಮಿಕ ಮುಂದಾಳು ಜಯಾನಂದ ಖಾರ್ವಿ ನಿಧನ

0
615

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕುಂದಾಪುರದ ಖಾರ್ವಿಕೇರಿ ನಿವಾಸಿ, ಧಾರ್ಮಿಕ ಮುಂದಾಳು, ವಾಲಿಬಾಲ್ ಆಟಗಾರ ಜಯಾನಂದ ಖಾರ್ವಿ (64ವ) ಮೇ 26ರ ಮುಂಜಾನೆ ಹೃದಯಾಘಾತದಿಂದ ನಿಧನರಾದರು.

ರಾಜ್ಯ ಮಟ್ಟದ ವಾಲಿಬಾಲ್ ಆಟಗಾರರಾಗಿದ್ದ ಅವರು 1980-90 ದಶಕದಲ್ಲಿ ಪ್ರಸಿದ್ಧ ಆಟಗಾರರಾಗಿದ್ದರು. ಭಂಡಾರಕಾರ್ಸ್ ಕಾಲೇಜಿನಲ್ಲಿ ಪದವಿ ಪಡೆದು ವಾಲಿಬಾಲ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.

Click Here

ವೃತ್ತಿಯಲ್ಲಿ ಗುತ್ತಿಗೆದಾರರಾಗಿ ಜೀವನ ನಿರ್ವಹಣೆ ಮಾಡಿಕೊಂಡು ಕೊಂಕಣಿ ಖಾರ್ವಿ ಸಮಾಜದ ಪ್ರತಿಷ್ಠಿತ ಶ್ರೀ ಮಹಾಕಾಳಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿದ್ಯಾರಂಗ ಮಿತ್ರ ಮಂಡಳಿ(ರಿ)ಯ ವಿದ್ಯಾನಿಧಿ ಯೋಜನೆಯ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ವಿದ್ಯಾರ್ಥಿಗಳಿಗೆ ವಿನೂತನವಾದ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿಕೊಂಡು ಬಂದವರು.

ಧಾರ್ಮಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು ಕುಂದೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ನಂದಿಕೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರಾಗಿ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಕ್ರೀಯವಾಗಿ ಇತ್ತೀಚೆಗೆ ನಡೆದ ಮಹಾಗಂಗಾರತಿಯ ಜವಾಬ್ದಾರಿಯನ್ನು ಸಮರ್ಪಕವಾಗಿ ನಡೆಸಿ ಧಾರ್ಮಿಕ ಸೇವೆ ಸಲ್ಲಿಸಿಕೊಂಡು ಬಂದಿದ್ದರು.
ಮೃತರು ಪತ್ನಿ ಶಾರದಾ, ಪುತ್ರ ಭರತ್ ನಿಶಾನ್, ಪುತ್ರಿ ನಿಹಾರಿಕಾ ಅವರನ್ನು ಅಗಲಿದ್ದಾರೆ.

Click Here

LEAVE A REPLY

Please enter your comment!
Please enter your name here