ಹಾಲಾಡಿ: ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮ ಸಮಾರೋಪ

0
844

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :
ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ, ಎಪಿಡಿ ಸಂಸ್ಥೆ ಬೆಂಗಳೂರು, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ, ಹೊಲಿಗೆ ಯಂತ್ರ ವಿತರಣೆ ಸಮಾರಂಭ ಕಾರ್ಯಕ್ರಮ ಡಿ.೨೦ರಂದು ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ಮಾತನಾಡಿ, ವಿಶೇಷಚೇತನರು ತರಬೇತಿಯ ಎಲ್ಲಾ ಕೌಶಲ್ಯಗಳನ್ನು ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಜೀವನವನ್ನು ಯಶಸ್ವಿಯಾಗಿ ಸಾಗಿಸಬೇಕು ಎಂದರು.

Click Here

ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾಧು ಅಧ್ಯಕ್ಷತೆ ವಹಿಸಿದ್ದರು.

ಸಂಸ್ಥೆಯ ನೋಡಲ್ ಅಧಿಕಾರಿ ಹರೀಶ ಶೆಟ್ಟಿ ಮಾತನಾಡಿ, ಎಪಿಡಿ ಸಂಸ್ಥೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಸ್ವವಿಸ್ತಾರವಾದ ಮಾಹಿತಿ ನೀಡಿ ಉಡುಪಿ ಜಿಲ್ಲಾ ಮಟ್ಟದ ವಿಶೇಷಚೇತನರ ಉದ್ಯೋಗ ಮೇಳವನ್ನು ಆಯೋಜಿಸುವ ಚಿಂತನೆ ಹೊಂದಿದೆ ಎಂದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ್ ಕುಮಾರ್, ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಮಂಜುನಾಥ ಹೆಬ್ಬಾರ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ವಿಕಲಚೇತನರ ಇಲಾಖೆಯ ಶಶಿಧರ ಉಪಸ್ಥಿತರಿದ್ದರು.

ಎಪಿಡಿ ಸಂಸ್ಥೆಯ ಪ್ರತಿನಿಧಿ ಆಕಾಶ್ ಶೆಟ್ಟಿ ನಿರೂಪಿಸಿ, ಸ್ವಾಗತಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ದೇವರಾಜ ವಂದಿಸಿದರು.

Click Here

LEAVE A REPLY

Please enter your comment!
Please enter your name here