ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭ

0
686

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಶಿಕ್ಷಣ ನಿಂತ ನೀರಲ್ಲ. ಪ್ರತೀ ದಿನವೂ ಹೊಸ ಹೊಸ ಬದಲಾವಣೆಯೊಂದಿಗೆ ನವೀನ ಚಿಂತನೆಗಳೊಂದಿಗೆ ಸಾಗುತ್ತಿದೆ. ಒಂದು ಸುಭದ್ರವಾದ ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು. ಉತ್ತಮವಾದ ಶಿಕ್ಷಕ ಮಾತ್ರ ಅತ್ಯುತ್ತಮವಾದ ವಿದ್ಯಾರ್ಥಿಗಳನ್ನು ಸೃಷ್ಟಿಸಲು ಸಾಧ್ಯವಾದ್ದರಿಂದ ಈ ಸಮಾಜವು ಯಾವಾಗಲೂ ಸಮರ್ಥವಾದ ಶಿಕ್ಷಕ ವರ್ಗವನ್ನು ಸದಾ ನಿರೀಕ್ಷಿಸುತ್ತದೆ. ಹಾಗಾಗಿ ಶಿಕ್ಷಕರಿಗೆ ಕಾಲ ಕಾಲಕ್ಕೆ ಅಗತ್ಯವಾದ ತರಬೇತಿಗಳನ್ನು ನೀಡಿದಾಗ ಶಿಕ್ಷಕರು ಬೋಧನೆಗೆ ಸಂಬಂಧಿಸಿದ ಹಲವಾರು ಕೌಶಲಗಳನ್ನು ಪಡೆದು ಉತ್ತಮ ಗುಣಮಟ್ಟದ ಬೋಧನೆ ಮಾಡಲು ಸಾಧ್ಯವಾಗಿ ಮಕ್ಕಳು ಕಲಿಕೆಯಲ್ಲಿ ಸರ್ವಾಂಗೀಣ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಹೇಳಿದರು.

ಇವರು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೂರು ದಿನಗಳು ನಡೆದ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Click Here

ಮೇ 26,27 ಮತ್ತು 28ರಂದು ನಡೆದ ಮೂರು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಶಿಕ್ಷಕರಿಗೆ ಬೋಧನೆಗೆ ಅಗತ್ಯವಾದ ಕೌಶಲಗಳನ್ನು ಕಲಿಸಲಾಯಿತು. ಮೊದಲ ದಿನದ ಕಾರ್ಯಾಗಾರದಲ್ಲಿ ಪ್ರೀಲ್ಯಾನ್ಸ್ ಅಕಾಡೆಮಿಕ್ ಕೌನ್ಸಿಲ್ ಕನ್ಸಲ್ಟೆಂಟ್ ಅಂಡ್ ಸಾಫ್ಟ್ ಸ್ಕಿಲ್ಸ್ ತರಬೇತುದಾರರಾಗಿರುವ ಅರುಣ ಎಸ್.ಅವರು ಶಿಕ್ಷಕರಿಗೆ “ಯಶಸ್ವಿ ತರಗತಿ ನಿರ್ವಹಣೆಯ ಕೌಶಲ”ಗಳನ್ನು ಪರಿಚಯಿಸಿದರು. ಎರಡು ಮತ್ತು ಮೂರನೇ ದಿನದ ಕಾರ್ಯಾಗಾರದಲ್ಲಿ ರಾಜ್ಯ ಮಟ್ಟದ ತರಬೇತುದಾರರಾದ ಅಶೋಕ್ ತೆಕ್ಕಟ್ಟೆ ಅವರು ಶಿಕ್ಷಕರಿಗೆ “ಇಂಗ್ಲಿಷ್ ಭಾಷಾ ಕೌಶಲಗಳು” ಕುರಿತು ತರಬೇತಿ ನೀಡಿದರು. ಮೂರು ದಿನಗಳು ನಡೆದ ಕಾರ್ಯಾಗಾರದಲ್ಲಿ ಶಿಕ್ಷಕ-ಶಿಕ್ಷಕಿಯರು ಬಹಳ ಉತ್ಸುಕತೆಯಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕ ಪ್ರದೀಪ್ ಉಪಸ್ಥಿತರಿದ್ದರು.

ಶಿಕ್ಷಕಿ ಅಕ್ಷತಾ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here