ಹೆಮ್ಮಾಡಿಯಲ್ಲಿ ಜನತಾ ಓರಿಂಟೇಶನ್ ಕಾರ್ಯಕ್ರಮ :ಸಾಧನೆಗೆ ಶ್ರಮವೇ ಗುರು – ಸಿ ಎ ಗೋಪಾಲ ಕೃಷ್ಣ ಭಟ್ ಅಭಿಮತ

0
396

Click Here

Click Here

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ :ಮನಸ್ಸಿನ ಸಮಸ್ಯೆ ಸರಿ ಮಾಡಲು ಡಾಕ್ಟರ್ ಇದ್ದಾರೆ. ಮನಸ್ಥಿತಿಯ ಸಮಸ್ಯೆ ಸರಿ ಮಾಡಲು ಯಾರು ಬರುವುದಿಲ್ಲ ನಾವೇ ಸರಿ ಮಾಡಿಕೊಳ್ಳಬೇಕು. ಅವಕಾಶ ಬಳಸಿಕೊಂಡು ಮನ್ನೆಡೆಯಬೇಕು. ನಮ್ಮ ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ ಹಾರ್ಡ್ ವರ್ಕ್ ಮಾಡಲೇ ಬೇಕು. ಸಾಧನೆಗೆ ಶ್ರಮವೇ ಗುರು. ಶ್ರಮ ನಮ್ಮದು ಅದಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶೈಕ್ಷಣಿಕ ಅಭ್ಯಾಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ.ಎ. ಗೋಪಾಲಕೃಷ್ಣ ಭಟ್ ಅಭಿಪ್ರಾಯಿಸಿದರು.

ಅವರು ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಾಣಿಜ್ಯ ವಿಭಾಗದ ಸಿ ಎ, ಸಿ ಎಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ ಓರಿಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ರೂಡಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿರುವ ನಮ್ಮ ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ರಾಜ್ಯ ರಾಷ್ಟ್ರ ಮಟ್ಟದಲ್ಲಿ ಶೈಕ್ಷಣಿಕ ಸಾಧನೆ ಮಾಡಿದ್ದಾರೆ. ನಮ್ಮಲ್ಲಿ ಸಿಗುವ ಅವಕಾಶ ಬಳಸಿಕೊಂಡು ಉತ್ತಮ ವ್ಯಕ್ತಿಗಳಾಗಿ ಎಂದು ಶುಭ ಹಾರೈಸಿದರು.

Click Here

ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮ, ಶಿಸ್ತು ಪಾಲನೆ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಪ್ರತಾಪ್ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಅಲ್ತಾರು ನಾಗರಾಜ್ ಸ್ವಾಗತಿಸಿ, ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here