ಬ್ರಹ್ಮಾವರ :ಲಂಚ ಪಡೆಯುತ್ತಿದ್ದ ಮೆಸ್ಕಾಂ ಅಧಿಕಾರಿ ಲೋಕಾ ಬಲೆಗೆ

0
305

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಪಡೆಯಲು 20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯನ್ನು ಬಂಧಿಸಿದ್ದಾರೆ. ಬ್ರಹ್ಮಾವರ ಮೆಸ್ಕಾಂ ನ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಅಶೋಕ ಪೂಜಾರಿ ಲೋಕಾ ಬಲೆಗೆ ಬಿದ್ದವರು.

Click Here

Click Here

ಮನೆಯೊಂದರ ವಿದ್ಯುತ್ ಸಂಪರ್ಕಕ್ಕೆ ಅಶೋಕ್ ಪೂಜಾರಿ 20 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಜೂನ್ 6ರಂದು ಮೆಸ್ಕಾಂ ಕಚೇರಿಯಲ್ಲಿ ಹಣ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕಾರ್ಯಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಪ್ರಭಾರ ಪೊಲೀಸ್ ಉಪಾಧೀಕ್ಷಕ ಮಂಜುನಾಥ್ ಶಂಕರ ಹಳ್ಳಿ, ಪೊಲೀಸ್ ನೀರಿಕ್ಷಕ ರಾಜೇಂದ್ರ ನಾಯಕ್ ಎಂ. ಎನ್ .ಹಾಗೂ ಮಂಗಳೂರು ಲೋಕಾಯುಕ್ತ ಪೊಲೀಸ್ ನಿರೀಕ್ಷಕಿ ಭಾರತಿ, ಹಾಗೂ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಸತೀಶ್ ಹಂದಾಡಿ, ಮಲ್ಲಿಕಾ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಭಾಗವಹಿಸಿದ್ದರು.

Click Here

LEAVE A REPLY

Please enter your comment!
Please enter your name here