ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಜೂನ್ 5 ರಂದು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅವರು ಗಿಡವನ್ನು ನೆಟ್ಟು , ಗಿಡವನ್ನು ಬೆಳೆಸಿ ನಾಡನ್ನು ಉಳಿಸಿ ಎಂದು ಹೇಳುತ್ತಾ, ಭವಿಷ್ಯದಲ್ಲಿ ಪ್ರತಿಯೊಂದು ಜೀವಿಯು ಬದುಕಬೇಕಾದರೆ ಪರಿಸರವನ್ನು ರಕ್ಷಿಸಬೇಕಾದ ಗುರುತರವಾದ ಜವಾಬ್ದಾರಿ ನಮ್ಮ ಮೇಲಿದೆ, ವಿದ್ಯಾರ್ಥಿ ಜೀವನದಲ್ಲಿ ಪರಿಸರವನ್ನು ಸಂರಕ್ಷಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ /ಬೋಧಕೇತರ ವೃಂದದವರು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.