ಕುಂದಾಪುರ :ತುಳಸಿ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0
601

Click Here

Click Here

ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ :ತುಳಸಿ ವಿದ್ಯಾ ಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು.

ಪರಿಸರ ದಿನಾಚರಣೆಯ ಅಂಗವಾಗಿ ಪ್ರತಿಯೊಂದು ಮಕ್ಕಳು ಅರಣ್ಯ ಇಲಾಖೆಯವರು ಕೊಡಮಾಡಿದ ಗಿಡಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸುವ ಸಂಕಲ್ಪ ಮಾಡಿದರು.

Click Here

ಈ ಸಂದರ್ಭದಲ್ಲಿ ಮಾತನಾಡಿದ ಅರಣ್ಯ ಇಲಾಖೆಯ ಸಿಬ್ಬಂದಿ ಜೀವನ್ ದಾಸ್ ಶೆಟ್ಟಿಯವರು ಮರಗಳು ನಮಗೆ ನೆರಳನ್ನು ಕೊಡುತ್ತದೆ. ನಾವು ಶುದ್ಧವಾದ ನೀರನ್ನು ಕುಡಿಯಬೇಕಾದರೆ ಮರಗಳ ಸಂರಕ್ಷಣೆ ಅಗತ್ಯ. ಹಾಗಾಗಿ ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.

ಗಿಡನೆಡುವ ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ರೇಷ್ಮ ಪ್ರದೀಪ್, ಶಾಲಾ ಆಡಳಿತ ಮಂಡಳಿ, ಹಾಗೂ ಶಿಕ್ಷಕವೃಂದದವರು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here