ಪಂಚವರ್ಣ ಸಂಘಟನೆಯಿಂದ ಡಾ. ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ದತ್ತು ಪಡೆದ ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ

0
294

ಪಂಚವರ್ಣದ ಶೈಕ್ಷಣಿಕ ದತ್ತು ಸ್ವೀಕಾರ ಶಾಘನೀಯ ಕಾರ್ಯ- ಡಾ.ಕೆ.ಕೃಷ್ಣ ಕಾಂಚನ್

ಕುಂದಾಪುರ ಮಿರರ್ ಸುದ್ದಿ…


ಕೋಟ: ಒಂದು ಸಂಘಟನೆ ಹೇಗಿರಬೇಕೆಂಬುವದನ್ನು ಪಂಚವರ್ಣ ಸಂಘಟನೆ ರಾಜ್ಯಕ್ಕೆ ಮಾದರಿಯಾಗಿ ತೋರಿಸಿಕೊಟ್ಟಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು.

ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಡಾ.ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ದತ್ತು ಸ್ವೀಕರಿಸಿದ ವಿದ್ಯಾರ್ಥಿಗಳಿಗೆ 6ನೇ ವರ್ಷದ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ ಸಂಘಟನೆಗಳು ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಕಾಣುತ್ತೇವೆ. ಆದರೆ ಪಂಚವರ್ಣ ಸಂಘಟನೆ ಅತ್ಯದ್ಭುತವಾಗಿ ಇಡೀ ರಾಜ್ಯಕ್ಕೆ ವಿಭಿನ್ನ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸುವುದು ಸುಲಭದ ಮಾತಲ್ಲ ಬದಲಾಗಿ ಅದನ್ನು ನಿರಂತವಾಗಿ ಕೊಂಡ್ಯೋಯುವುದು ಸವಾಲಿನ ಕಾರ್ಯ ಈ ದಿಸೆಯಲ್ಲಿ ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿಯಲ್ಲಿ ನಿಲ್ಲಬೇಕು ಹಾಗೂ ಇನೊರ್ವರಿಗೂ ಸಹಾಯಹಸ್ತ ಚಾಚುವ ಮನಸ್ಥಿತಿ ಸೃಷ್ಠಿಸಿಕೊಳ್ಳಿ ಎಂದು ಕರೆ ನೀಡಿದರು.

Click Here

Click Here

ಇದೇ ವೇಳೆ ಸುಮಾರು 60ಸಾವಿರ ರೂ ಮೌಲ್ಯದ ನಾಲ್ಕು ವಿದ್ಯಾರ್ಥಿಗಳಲ್ಲದೆ ಇತರ ಬಡ ವಿದ್ಯಾರ್ಥಿಗಳಿಗೆ ಪರಿಕರಗಳನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹಸ್ತಾಂತರಿಸಿ ಶುಭಹಾರೈಸಿದರು.

ಸಭೆಯ ಅಧ್ಯಕ್ಷೆತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕೋಟದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ, ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ ಮಯ್ಯ, ಕೊಲ್ಲೂರು ಮುಕಾಂಬಿಕಾ ದೇಗುಲದ ಮಾಜಿ ಟ್ರಸ್ಟಿ ಕೆ. ಪಿ ಶೇಖರ್, ಪಂಚವರ್ಣ ಮಹಿಳಾ ಮಂಡಲದ ಪೂರ್ವಾಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು.

ಸಂಘದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸ್ವಾಗತಿಸಿ, ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿ ವಂದಿಸಿದರು.

Click Here

LEAVE A REPLY

Please enter your comment!
Please enter your name here