ಪಂಚವರ್ಣದಿಂದ 258 ನೇ ಭಾನುವಾರದ ಪರಿಸರಸ್ನೇಹಿ ಹಸಿರುಜೀವ ಅಭಿಯಾನ

0
307

ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವನಮಹೋತ್ಸವ ವಧು ವೈಷ್ಣವಿ ಪೇತ್ರಿಯವರಿಂದ ಚಾಲನೆ

ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ: ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ, ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ಗೆಳೆಯರ ಬಳಗ ಕಾರ್ಕಡ, ಪಾಂಚಜನ್ಯ ಸಂಘ ಪಾರಂಪಳ್ಳಿ ಹಂದಟ್ಟು ಇವರ ಸಂಯೋಜನೆಯೊಂದಿಗೆ 258ನೇ ಭಾನುವಾರ ಪರಿಸರಸ್ನೇಹಿ ಹಸಿರುಜೀವ ಅಭಿಯಾನ ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಮ್ಮಿಕೊಂಡಿತು.

ಈ ವೇಳೆ ಸಾಲಿಗ್ರಾಮ ಗುರುನರಸಿಂಹ ಸಭಾಭವನದಲ್ಲಿ ವಿವಾಹ ಮಹೋತ್ಸವಕ್ಕೆ ಆಗಮಿಸಿದ ನವ ವಧು ವೈಷ್ಣವಿ ಪೇತ್ರಿ ಇವರು ಗಿಡ ನಡುವ ಕಾರ್ಯಕ್ರಮಕ್ಕೆ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿದರು.

ಜಯಕರ್ನಾಟಕ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಸಾಲಿಗ್ರಾಮ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

Click Here

Click Here

ಸುಮಾರು 48ಕ್ಕೂ ಅಧಿಕ ಗಿಡಗಳನ್ನು ಹೆದ್ದಾರಿ ಸರ್ವಿಸ್ ರಸ್ತೆಯ ಅಕ್ಕಪಕ್ಕ ನೆಡಲಾಯಿತು.

ಸಾಲಿಗ್ರಾಮದ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಗಾಣಿಗ, ಪತ್ರತರ್ಕ ಅಶ್ವಥ್ ಆಚಾರ್ಯ, ಸಾಲಿಗ್ರಾಮ ಆಟೋ ಚಾಲಕ ಮಾಲಕ ಸಂಘದ ಪದಾಧಿಕಾರಿಗಳು ಭಾಗವಹಿಸಿದರು.

ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾಮಂಡಲದ ಪೂರ್ವಾಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ್ ಹೊಳ್ಳ, ಕಾರ್ಯದರ್ಶಿ ಶೀನ, ಪಾಂಚಜನ್ಯ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಮರಕಾಲ, ಕಾರ್ಯದರ್ಶಿ ಕೃಷ್ಣ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ನಿರ್ವಹಿಸಿದರು. ಉಪಾಧ್ಯಕ್ಷ ದಿನೇಶ್ ಆಚಾರ್ ಮತ್ತಿತರರು ಸಹಕರಿಸಿದರು.

Click Here

LEAVE A REPLY

Please enter your comment!
Please enter your name here