ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಮೂಕಾಂಬಿಕೆಯ ದರ್ಶನ ಪಡೆದು ದೇವಳದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಕ್ಷೇತ್ರದ ಪ್ರಧಾನ ಅರ್ಚಕ ನರಸಿಂಹ ಅಡಿಗ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು.
ಶುಕ್ರವಾರದಂದು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾತ್ರಿ ವೇಳೆ ಕೊಲ್ಲೂರಿಗೆ ಭೇಟಿ ನೀಡಿ ವಾಸ್ತವ್ಯ ಮಾಡಿದ್ದರು.
ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೃಹ ಸಚಿವರನ್ನು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಾಬು ಹೆಗ್ಡೆಯವರು ಸನ್ಮಾನಿಸಿದರು.
ಮೀನುಗಾರಿಕಾ ಸಚಿವರಾದ ಮಾಂಕಾಳ್ ವೈದ್ಯ,ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಎಂ.ಎ. ಗಫೂರ್, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.











