ಕೋಟ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ ಪರಮೇಶ್ವರ್ ಭೇಟಿ

0
563

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ರಾಜ್ಯ ಗೃಹ ಸಚಿವ ಡಾ. ಪರಮೇಶ್ವರ್ ಶನಿವಾರ ಬೆಳಿಗ್ಗೆ ಕೋಟ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ಸಂದರ್ಭ ಠಾಣೆಯಲ್ಲಿದ್ದ ಕೆಲವು ಗ್ರಾಮಸ್ಥರ ಜೊತೆ ಮಾತನಾಡಿದ ಪರಮೇಶ್ವರ್, ಠಾಣೆಯ ಕುರಿತು ಅಭಿಪ್ರಾಯ ಪಡೆದುಕೊಂಡರು. ಪೋಲೀಸರ ವಸತಿ ಕುರಿತು ಸಚಿವರು ಮಾಹಿತಿ ಪಡೆದುಕೊಂಡರು.

Click Here

ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಸಿವಿಲ್ ವ್ಯಾಜ್ಯಗಳ ಎಸೈ ರಾಘವೇಂದ್ರ ಸಿ. ವಿವರಿಸಿದರು. ದಲಿತ ಕುಂದುಕೊರತೆ ಸಭೆಗಳನ್ನು ಪ್ರತಿತಿಂಗಳು ನಡೆಸುತ್ತಿದ್ದೇವೆ ಎಂದರು. ಸಾಮಾಜಿಕ ಕಾರ್ಯಕರ್ತ ಡಾ. ಎಮ್ ವಿ ಹೊಳ್ಳ ಸಚಿವರಿಗೆ, ಪೋಲೀಸ್ ವಾಹನ ಕೊರತೆ ಕುರಿತು ಗಮನ ಸೆಳೆದರು. ಹೆದ್ದಾರಿಯಲ್ಲಿ ಅಲ್ಲಲ್ಲಿ ಬ್ಯಾರಿಕೇಡ್ ಆವಾಂತರ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಸಮಾಲೋಚಿಸಿ ಸುಗಮ ಸಂಚಾರ ವ್ಯವಸ್ಥೆ ಗೆ ಅನುವು ಮಾಡಿಕೊಡುವಂತೆ ಮನವಿ ಮಾಡಲಾಯಿತು.

ಬಳಿಕ ಮಾತನಾಡಿದ ಸಚಿವರು, ಎಲ್ಲಾ ಜಾತಿ, ಸಮುದಾಯದ ಸಣ್ಣ, ದೊಡ್ಡ ಪ್ರಾರ್ಥನಾ ಮಂದಿರ ಗಳಿಗೆ ರಾತ್ರಿ ಬೆಳಕಿನ ಸೌಲಭ್ಯ ಹಾಗೂ ಸಿಸಿಟಿವಿ ಅಳವಡಿಸಿ, ಅದರ ಮಾಹಿತಿ ಪ್ರತಿದಿನ ಠಾಣಾ ವ್ಯಾಪ್ತಿಯಲ್ಲಿ ಬರುವಂತೆಯೂ ಸಲಹೆ ನೀಡಿದರು. ಅನ್ಯ ರಾಜ್ಯಗಳಲ್ಲಿನ ವಿವರ ಪಡೆದು ಪೊಲೀಸ್ ಕಾನ್ಸ್ಟೇಬಲ್ ಆಸಕ್ತ ಅಭ್ಯರ್ಥಿಗಳ ವಯೋಮಿತಿ 33 ವರ್ಷಕ್ಕೆ ಏರಿಕೆ ಬಗ್ಗೆ ಕ್ರಮ ಕೈ ಗೊಳ್ಳಲಾಗುವುದು ಎಂದು ಹೇಳಿದರು. ಕೋಟ ಠಾಣೆಯಲ್ಲಿ ವಾಹನದ ಕೊರತೆ, ಟೋಲ್ ಸಮಸ್ಯೆ, ಕರಾವಳಿ ತೀರ ಭದ್ರತೆ, ದಲಿತ ಸಮಸ್ಯೆಗಳ ನಿರ್ಮೂಲನೆ, ಕಂದಾಯ ಇಲಾಖೆಯ ವ್ಯಾಜ್ಯಗಳು ಸೇರಿದಂತೆ ಅನೇಕ ಸಮಸ್ಯೆಗಳಿಗೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿ ಕೊರತೆ ಬಗ್ಗೆ ಪ್ರತಿಕ್ರಿಯಿಸಿ, ಆದಷ್ಟು ಬೇಗ ನೇಮಕಾತಿ ಪಕ್ರಿಯೆ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲೆಯ ಹಿರಿಯ ಪೋಲೀಸ್ ಅಧಿಕಾರಿಗಳಾದ ಐಜಿ ಅಮಿತ್ ಸಿಂಗ್, ಎಸ್ಪಿ ಹರಿರಾಂ ಶಂಕರ್, ಎಎಸ್ಪಿ ಪರಮೇಶ್ವರ್, ಉಡುಪಿ ಡಿಎಸ್ಪಿ ಡಿ ಟಿ ಪ್ರಭು, ಕುಂದಾಪುರ ಡಿಎಸ್ಪಿ ಎಚ್ ಡಿ ಕುಲಕರ್ಣಿ, ಬ್ರಹ್ಮಾವರ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಕೋಟ ಉಪನಿರೀಕ್ಷಕ ರಾಘವೇಂದ್ರ ಸಿ. ಕೋಟ ಎಸ್ಐ ಸುಧಾ ಪ್ರಭು ಮತ್ತು ಸಿಬ್ಬಂದಿಗಳು ಹಾಗೂ ಕಾಂಗ್ರೆಸ್ ಜಿಲ್ಲಾ ಮಾಜಿ ಅಧ್ಯಕ್ಷ ಅಬ್ದುಲ್ ಗಫೂರ್, ಮುನಿಯಾಲು ಉದಯ ಕುಮಾರ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ, ಗೋಪಾಲ ಪೂಜಾರಿ, ರಾಜು ಪೂಜಾರಿ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here