ಸಿದ್ದಾಪುರ :ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ “ಶ್ರೀಕಾರ” ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವ

0
667

Click Here

Click Here

ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ :ಸಾಮಾನ್ಯ ವಿದ್ಯಾರ್ಥಿಯನ್ನು ಅಸಮಾನ್ಯ ವಿದ್ಯಾರ್ಥಿಯನ್ನಾಗಿ ಮಾಡುವುದೇ ಶಾಲೆಯ ಉತ್ತಮ ಸಾಧನೆಯಾಗಿದೆ. ಸಂಘ ಪರಿವಾರದ ಹಿನ್ನಲೆಯಲ್ಲಿ ಆರಂಭಗೊಂಡ ಸಿದ್ದಾಪುರ ಸರಸ್ವತಿ ವಿದ್ಯಾಲಯವು, ಹಣ ಮಾಡುವ ಉದ್ದೇಶದಿಂದ ಆರಂಭಗೊಂಡ ಶಾಲೆಯಲ್ಲ. ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಬೆಳೆಸುವ ಉದ್ದೇಶದಿಂದ ಆರಂಭಗೊಂಡ ಈ ಶಾಲೆ, ಮುಂದೆ ಹಾಗೇಯೇ ಮುಂದುವರಿಯುತ್ತದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಅವರು ಸುಮುಖ ಎಜ್ಯುಕೇಶನ್ ಟ್ರಸ್ಟ್ ನೇತ್ರತ್ವದಲ್ಲಿ ಸಿದ್ದಾಪುರ ಸರಸ್ವತಿ ವಿದ್ಯಾಲಯದಲ್ಲಿ ನೂತನವಾಗಿ ಆರಂಭಗೊಂಡ ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ತರಗತಿ ಉದ್ಘಾಟಿಸಿ ಮಾತನಾಡಿದರು.

Click Here

ಸುಮುಖ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಹಾಗೂ ಜ್ಞಾನಸರಸ್ವತಿ ಪಿಯು ಕಾಲೇಜಿನ ಸಂಸ್ಥಾಪಕ ಸುರೇಶ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾಸಂಸ್ಥೆ ನಡೆಸಬೇಕು ಎನ್ನುವ ಕನಸ್ಸು ಬಾಲ್ಯದಿಂದಲೂ ಇತ್ತು. ಈ ಕನಸಿಗೆ ಸಹಕಾರ ನೀಡಿದವರು ಸಿದ್ದಾಪುರ ಸರಸ್ವತಿ ವಿದ್ಯಾಲಯ. 25 ವರ್ಷ ಪೂರೈಸಿರುವ ಈ ಸರಸ್ವತಿ ವಿದ್ಯಾಲಯವನ್ನು ಹೊಸ ಆಡಳಿತ ಮಂಡಳಿಯಿಂದ ಜ್ಞಾನಸರಸ್ವತಿ ಪಿಯು ಕಾಲೇಜು ಆರಂಭಗೊಂಡಿದೆ. ಸಾಮಾನ್ಯ ವಿದ್ಯಾರ್ಥಿಯನ್ನು ಅಸಮಾನ್ಯ ವಿದ್ಯಾರ್ಥಿಯನ್ನಾಗಿ ಮಾಡುವುದೇ ಈ ಕಾಲೇಜಿನ ಉದ್ದೇಶವಾಗಿದೆ ಎಂದರು.

ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಮೊಳಹಳ್ಳಿ ಅವರು ಸಂಪನ್ಮೂಲನ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ಶ್ರೀಲತಾ ಶೆಟ್ಟಿ ಕಡ್ರಿ, ಸುಮುಖ ಎಜ್ಯುಕೇಶನ್ ಟ್ರಸ್ಟ್ ಕಾರ್ಯದರ್ಶಿ ಪಾಂಡುರಂಗ ಪಡಿಯಾರ್, ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಡಿ. ಗೋಪಾಲಕೃಷ್ಣ ಕಾಮತ್, ಮುಖ್ಯ ಶಿಕ್ಷಕಿ ಶ್ವೇತಾ ಮೊದಲಾದವರು ಉಪಸ್ಥಿತರಿದ್ದರು.

ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಉಪನ್ಯಾಸಕರಾದ ಜಿ. ನಾಗರಾಜ ಮತ್ತು ಸಿ.ಪಿ ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು. ಉಪ ಪ್ರಾಂಶುಪಾಲ ಹರ್ಷ ಶೆಟ್ಟಿ ವಂದಿಸಿದರು.

Click Here

LEAVE A REPLY

Please enter your comment!
Please enter your name here