ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ದರ್ಮ ಪ್ರಕಾಶ್ ಕುಂದಾಪುರ ಇವರನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸೇವಾದಳ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ಕಿಶೋರ್ ಕುಮಾರ್ ಎರ್ಮಾಳ ಆದೇಶ ಮಾಡಿರುತ್ತಾರೆ.
ದರ್ಮ ಪ್ರಕಾಶ್ ರವರು ಕಾಂಗ್ರೆಸ್ ಪಕ್ಷದ ಕ್ರಿಯಾಶೀಲ ಕಾರ್ಯಕರ್ತರಾಗಿದ್ದು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು, ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.











