ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ರೈಲ್ವೆ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ರೈಲು ಸಂಚಾರಕ್ಕೆ ತೊಡಕುಂಟಾದ ಘಟನೆ ಕುಂದಾಪುರ ರೈಲು ನಿಲ್ದಾಣದ ಸಮೀಪ ಮೇರ್ಡಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಇಂದು ಬೆಳಿಗ್ಗೆ ಬೀಸಿದ ಭಾರಿ ಗಾಳಿ ಮಳೆಗೆ ಭಾರೀ ಗಾತ್ರದ ಮರ ಮುರಿದು ರೈಲ್ವೆ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿತ್ತು. ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮತ್ಸ್ಯಗಂಧಾ ಎಕ್ಸಪ್ರೆಸ್ ಮತ್ತು ಮಂಗಳೂರು-ಮಡಗಂವ್ ಪ್ಯಾಸೆಂಜರ್ ರೈಲು ಅಲ್ಲಲ್ಲೇ ನಿಂತುಕೊಂಡಿತು. ಕೂಡಲೇ ತುಂಡಾದ ವಿದ್ಯುತ್ ತಂತಿಗಳನ್ನು ಸರಿಪಡಿಸಿ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಸುಮಾರು ಎರಡು ಗಂಟೆ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.











