ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ.

0
402

Click Here

Click Here

ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಉಡುಪಿ ಜಿಲ್ಲೆಯ ಹಾಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಿ, ನೂತನ ಜಿಲ್ಲಾಧಿಕಾರಿಯಾಗಿ ಸದಸ್ಯ ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವರೂಪ ಟಿ.ಕೆ. ಐಎಎಸ್‌ ಅವರನ್ನು ರಾಜ್ಯ ಸರಕಾರ ವರ್ಗಾಯಿಸಿದೆ.

ಟೈಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್‌ಡಿಪಿಆ‌ರ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್‌ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು.

Click Here

2023ರ ಜುಲೈ 14ರಿಂದ ಉಡುಪಿಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಡಾ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು, ಯಾವುದೇ ಹುದ್ದೆಯನ್ನು ತೋರಿಸಿಲ್ಲ.

Click Here

LEAVE A REPLY

Please enter your comment!
Please enter your name here