ಕುಂದಾಪುರ ಮಿರರ್ ಸುದ್ದಿ…
ಬೈಂದೂರು :ದೇಶದಾದ್ಯಂತ ಭಾರತೀಯ ಜನತಾ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು ಬೈಂದೂರು ಮಂಡಲದ ನೂತನ ಅಧ್ಯಕ್ಷರಾಗಿ ಅನಿತಾ ಆರ್.ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿ ರವಿಶಂಕರ್ ಮಿಜಾರು ಕರ್ತವ್ಯ ನಿರ್ವಹಿಸಿದ್ದರು.
ನೂತನ ಅಧ್ಯಕ್ಷೆ ಅನಿತಾ ಆರ್. ಕೆ ಅವರು ಮರವಂತೆಯವರಾಗಿದ್ದು, ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
ಬೈಂದೂರು ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ದೀಪಕ್ ಕುಮಾರ್ ಶೆಟ್ಟಿ ಅವರು ಅಧ್ಯಕ್ಷ ಸ್ಥಾನಕ್ಕೆ ಜೂನ್ 20ರಂದು ರಾಜೀನಾಮೆ ಸಲ್ಲಿಸಿದ್ದರು.











