ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಸಂಸ್ಥೆಯ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಇವರು ಯೋಗದ ಮಹತ್ವ, ಸಂಪ್ರದಾಯಬದ್ಧ ಭಾರತೀಯ ಜೀವನ ಶೈಲಿಯಲ್ಲಿ ಯೋಗ ಒಂದು ಭಾಗವೇ ಆಗಿತ್ತು ಎಂದು ತಿಳಿಸಿ, ಈ ಬಾರಿಯ ಯೋಗ ದಿನಾಚರಣೆಯ ಉದ್ದೇಶಗಳನ್ನು ಕುರಿತು ಮಾಹಿತಿ ನೀಡಿದರು. ಯೋಗಃ ಸ್ವಸ್ಥ ಜೀವನಮ್ ಎಂಬ ಘೋಷಣೆಯೊಂದಿಗೆ ಯೋಗವು ಆರೋಗ್ಯಕರ ಜೀವನ ಶೈಲಿಯಾಗಿದೆ. ಯೋಗದಿಂದ ಸಂಪೂರ್ಣ ಸ್ವಾಸ್ಥ್ಯ ಸಾಧ್ಯ ಎಂದು ತಿಳಿಸಿದರು.
ಶಾಲಾ ಶಿಕ್ಷಕ ಪ್ರದೀಪ್ ಕುಮಾರ್ ಇವರ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ಏಕಕಾಲಕ್ಕೆ ಸೂರ್ಯ ನಮಸ್ಕಾರ, ವಿವಿಧ ಯೋಗಾಸನ ಹಾಗೂ ಪ್ರಾಣಾಯಾಮಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಶಿಕ್ಷಕಿ ಪ್ರಜ್ಞಾ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ – ಶಿಕ್ಷಕಿಯರು, ಬೋಧಕೇತರ ಸಿಬ್ಬಂದಿಯವರು ಉತ್ಸಾಹದಿಂದ ಪಾಲ್ಗೊಂಡಿದ್ದರು.











