ಕುಂದಾಪುರ ಮಿರರ್ ಸುದ್ದಿ…

ಅಂಪಾರು :ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಗೆ ಅಂಪಾರು ವ್ಯವಸಾಯಿಕ ಸಂಘದಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಅಂಪಾರು ಸಂಜಯ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ ಕುಮಾರ್ ಶೆಟ್ಟಿ ಬಲಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಅಂಪಾರು ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ನವೀನ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ , ನಿರ್ದೇಶಕರಾದ ಕಿರಣ್ ಹೆಗ್ಡೆ, ಮೋಹನ್ ವೈದ್ಯ, ಅರುಣ್ ಕುಮಾರ್ ಶೆಟ್ಟಿ, ಮನೋಹರ ಶೆಟ್ಟಿ, ಅಜಿತ್ ಕುಮಾರ, ಜಯರಾಮ ಶೆಟ್ಟಿ, ಉಮೇಶ್ ಕೊಠಾರಿ, ಸುನಿಲ್, ಮಂಜುನಾಥ್ ನಾಯ್ಕ, ಭಾರತಿ ಬಾಲಕೃಷ್ಣ ಶೇಟ್, ಜ್ಯೋತಿ ಉದಯ ಕುಮಾರ್ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಸಂಜಯ ಗಾಂಧಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ, ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲಾ ಆಡಳಿತಾಧಿಕಾರಿ ಚೈತ್ರ ಯಡಿಯಾಳ್, ಅಂಪಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸಂಧ್ಯಾ, ಸಂಜಯಗಾಂಧಿ ಫಂಡ್ ಕಮಿಟಿ ಅಧ್ಯಕ್ಷೆ ಶಾರದಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.











