ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ಜೂನ್ 21 ಶನಿವಾರದಂದು 11ನೇ ವರ್ಷದ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ವಿಷಯದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವಿದ್ಯಾಭಾರತಿ ಕರ್ನಾಟಕ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರು,ಉದ್ಯಮಿಗಳು ಆಗಿರುವ ಟಿ.ಜಿ.ಪಾಂಡುರಂಗ ಪೈ ರವರು ಮಾತನಾಡಿ ಮಕ್ಕಳು ಭಕ್ತಿಯೋಗದ ಉಪಾಸನೆ ಮಾಡಬೇಕು. ಕರ್ಮಯೋಗದ ಮೂಲಕ ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕು. ಭಾರತವು ವಿಶ್ವ ಭಾರತವಾಗಬೇಕು ಎಂದರು.
ತುಳಸಿ ವಿದ್ಯಾಮಂದಿರದ ವಿದ್ಯಾರ್ಥಿಗಳು ಇವರ ಮಾರ್ಗದರ್ಶನದಲ್ಲಿ ಅನೇಕ ವಿಧದ ಯೋಗಾಸನ ಹಾಗೂ ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಿದರು.
ತುಳಸಿ ವಿದ್ಯಾಮಂದಿರದ ಅಧ್ಯಕ್ಷರಾದ ಕೃಷ್ಣರಾಯ ಶಾನುಬಾಗ್ ರವರು ಮಕ್ಕಳಿಗೆ ಯೋಗದ ಮಹತ್ವವನ್ನು ತಿಳಿಸಿದರು. ಶಿಕ್ಷಕಿ ರೂಪ ಕಾರ್ಯಕ್ರಮವನ್ನು ನಿರ್ವಹಿಸಿದರು. ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.











