ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅಮೃತೇಶ್ವರೀ ದೇಗುಲಕ್ಕೆ ಭೇಟಿ, ವಿಶೇಷ ಪೂಜೆ

0
752

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಉಡುಪಿ ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡು ಅಧಿಕಾರಿ ಸ್ವೀಕರಿಸಿದ ಸ್ವರೂಪ ಟಿ.ಕೆ ಭಾನುವಾರ ಕೋಟದ ಅಮೃತೇಶ್ವರೀ ದೇಗುಲಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಜಿಲ್ಲಾಧಿಕಾರಿಯವರನ್ನು ಬರಮಾಡಿಕೊಂಡು ಸ್ವಾಗತಿಸಿದರು.

Click Here

ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿಕೊಂಡ ಜಿಲ್ಲಾಧಿಕಾರಿಯವರನ್ನು ದೇಗುಲದ ವತಿಯಿಂದ ಶಾಲು ಹೋದಿಸಿ ಪ್ರಸಾದ ವಿತರಿಸಿ ಗೌರವಿಸಲಾಯಿತು.

ದೇಗುಲದ ಆಡಳಿತ ಮಂಡಳಿಯ ಸದಸ್ಯರಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಚಂದ್ರ ಆಚಾರ್, ಸುಧಾ ಪೂಜಾರಿ, ಜ್ಯೋತಿ ದೇವದಾಸ್, ಮಾಜಿ ಟ್ರಸ್ಟಿ ಚಂದ್ರ ಪೂಜಾರಿ, ರಾಜು ಪೂಜಾರಿ, ಸುಬ್ರಾಯ ಜೋಗಿ, ಸ್ಥಳೀಯ ದೇವೇಂದ್ರ ಗಾಣಿಗ, ಭರತ್ ಗಾಣಿಗ, ಅರ್ಚಕರಾದ ವೀರಭದ್ರ, ರಾಘವೇಂದ್ರ ಜೋಗಿ, ವಿಜಯ ಜೋಗಿ, ದೇಗುದ ವ್ಯವಸ್ಥಾಪಕ ಗಣೇಶ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here