ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ವಾಗಿ ಜ್ಯಾರಿಮಾಡಬೇಕು. ನರೇಗಾ ಕೂಲಿ ಕಾರ್ಮಿಕ ರಿಗೆ ಕೆಲಸದ ವೇತನ ಬಾಕಿ ಹಣವನ್ನು ಬಿಡುಗಡೆಗೊಳಿಸಬೇಕು. ದಿನ ಕೂಲಿ 600/-ಕ್ಕೆ ವಿಸ್ತರಿಸಬೇಕು ಹಾಗೂ ಎಷ್ಟು ದಿನ ಕೆಲಸ ಬಯಸಿ ಅರ್ಜಿ ಸಲ್ಲಿಸುತ್ತಾರೋ ಆಷ್ಟು ದಿನ ಅವರಿಗೆ ಕೆಲಸ ಒದಗಿಸಬೇಕು ಎಂದು ಅಖಿಲ ಭಾರತ ಕೃಷಿಕೂಲಿಕಾರರ ಸಂಘ(AIAWU)ದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
















ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬುಧವಾರದಂದು ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಎದುರು ಜರುಗಿದ ನರೇಗಾ ಕೂಲಿಕಾರರ ಬೃಹತ್ ಪ್ರತಿಭಟನೆಯಲ್ಲಿ ಕೂಲಿ ಕಾರ್ಮಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕೃಷಿಕೂಲಿಕಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಜೀವ ಪಡುಕೋಣೆ ಮಾತನಾಡಿ ಉದ್ಯೋಗ ಖಾತ್ರಿ ಕೆಲಸಗಾರರಿಗೆ ಬೇಸಿಗೆಯಲ್ಲಿ ಮಣ್ಣುಗಟ್ಟಿಯಾಗಿರುವುದರಿಂದ ಕೆಲಸದ ಪ್ರಮಾಣವನ್ನು ಅರ್ಧದಷ್ಟು ಕಡಿಮೆಮಾಡಬೇಕು, ಕೂಲಿಕಾರರ ವಾಸಸ್ಥಳದಿಂದ ಕೆಲಸದ ಸ್ಥಳಕ್ಕೆ ತಲಪಲು ಪ್ರಯಾಣ ಭತ್ಯೆ ತಪ್ಪದೆ ಕೊಡಬೇಕು ಎಂದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಎಚ್.ನರಸಿಂಹ. ಇವರು ನರೇಗಾ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಕೂಲಿಕಾರರರ ನ್ಯಾಯಬದ್ಧ ಹೋರಾಟಕ್ಕೆ ಸಿಐಟಿಯು ಕಾರ್ಮಿಕ ಸಂಘದ ಸಂಪೂರ್ಣ ಬೆಂಬಲ ವ್ಯಕ್ತ ಪಡಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ವೇತ.ಎನ್. ಇವರ ಮೂಲಕ ಮುಖ್ಯಮಂತ್ರಿಗಳಿಗೆ ಸಾಮೂಹಿಕ ಮನವಿ ರವಾನಿಸಲಾಯಿತು .
ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿ ನಾಗರತ್ನ ನಾಡ ಕಾರ್ಯಕ್ರಮ ನಿರೂಪಿಸಿದರು. ಮುಖಂಡರಾದ ಬಸ್ರೂರು ಗ್ರಾಮ ಪಂಚಾಯತ್ ಸದಸ್ಯೆಕಮಲ ಸೆಟ್ಟಿಗಾರ , ಶ್ಯಾಮಲ ಗುಜ್ಜಾಡಿ ಮೊದಲಾದವರು ಹೋರಾಟದ ನೇತೃತ್ವ ವಹಿಸಿದ್ದರು.











