ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ರಾಜ್ಯ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಮೊಳಹಳ್ಳಿ ಗ್ರಾಮ ಪಂಚಾಯತ್ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಯಿತು. ಮೊಳಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನಪಾಲ್ ಶೆಟ್ಟಿಯವರು ಮಾತನಾಡಿ ಸರಕಾರದ ಜನ ವಿರೋಧಿ ನೀತಿಗಳಿಂದ ಜನರು ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮೊಳಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮೊನೋಜ್ ಶೆಟ್ಟಿ, ಚಂದ್ರಕಲಾ ದಯಾನಂದ್, ಪ್ರಶಾಂತ್ ಕೋಣೆಹರ, ಪ್ರತಾಪ್ ಹೆಗ್ಡೆ ಕೈಲ್ಕೆರೆ, ಭಗವಾನದಾಸ್ ಶೆಟ್ಟಿ, ಜಯಶೀಲ ಶೆಟ್ಟಿ, ಸುದರ್ಶನ್ ಶೆಟ್ಟಿ, ಅಭಿಲಾಷ್ ಅಮೀನ್ ಮತ್ತು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.











