ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದರು.
ಶ್ರೀದೇವರ ದರ್ಶನ ಪಡೆದ ಅವರು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಸಚಿವರನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಗೋಪಾಲಕೃಷ್ಣ ಶೆಟ್ಟಿ ಮಾರ್ಕೊಡು ಪ್ರಸಾದ ನೀಡಿ ಗೌರವಿಸಿದರು.
ಕೋಟೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಸಮಾಜ ಸೇವಕ ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ದೇವಳದ ಪ್ರಧಾನ ತಂತ್ರಿ ಪ್ರಸನ್ನಕುಮಾರ್ ಐತಾಳ್, ಕೆ.ರಾಜಗೋಪಾಲ ಆಚಾರ್ಯ, ಬಿ.ಹಿರಿಯಣ್ಣ, ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಗಿಣಿ ದೇವಾಡಿಗ, ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ.ಪ್ರಕಾಶ್ ಜಿ ಪೂಜಾರಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಗ್ರಾಪಂ. ಸದಸ್ಯರು, ಸ್ಥಳೀಯ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.











