ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿಗಳನ್ನು ಅನುಷ್ಠಾನಗೊಳಿಸಲು ಮತ್ತು ಪ್ರಾಧಿಕಾರ ಕಚೇರಿಯಲ್ಲಿ ತಾಂತ್ರಿಕ ಸಿಬ್ಬಂದಿಗಳನ್ನು ಹೆಚ್ಚಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದ ನಿಯೋಗವು, ನಗರ ಮತ್ತು ಗ್ರಾಮಾಂತರ ಯೋಜನೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ಡಾ. ಪಂಕಜ ಎಂ ಎಸ್ ರವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.
ಭಿನ್ನವಾದ ಭೌಗೋಳಿಕ ಹಿನ್ನೆಲೆ ಹೊಂದಿರುವ ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರತ್ಯೇಕ ಕರಾವಳಿ ವಲಯ ನಿಯಮಾವಳಿ ರಚಿಸಬೇಕೆಂದು ಒತ್ತಾಯಿಸಲಾಯಿತು.
9/11 ನಿಯಮಗಳ ಸರಳಿಕರಣ ,ಕಟ್ ಕನ್ವರ್ಷನ್ , ರಸ್ತೆ ಮಾರ್ಜಿನ್ ಕಡಿತಗೊಳಿಸಲು ಹಾಗೂ ಫೈಲ್ ವಿಲೇವಾರಿಗಳನ್ನು ತ್ವರಿತಗೊಳಿಸಲು ಹೆಚ್ಚಿನ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಲು ಮನವಿಯಲ್ಲಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಸದಾಶಿವ ಉಳ್ಳಾಲ , ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ದಿನಕರ ಹೆರೂರು , ಕುಂದಾಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ , ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಮುಸ್ತಾಫ್, ಮೂಡುಬಿದ್ರೆ ನಗರ ಪ್ರಾಧಿಕಾರ ಅಧ್ಯಕ್ಷರಾದ ಹರ್ಷವರ್ಧನ ಜೈನ್ ಇನ್ನಿತರರು ನಿಯೋಗದಲ್ಲಿ ಉಪಸ್ಥಿತರಿದ್ದರು.











