ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ :ಶಂಕರನಾರಾಯಣ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯನ್ನು ವಜಾಗೊಳಿಸಿ ಆದೇಶ ಮಾಡಿರುವ ವಿರುದ್ಧ ಹಾಗೂ ಸಿಬ್ಬಂದಿಯ ಮುಂಬಡ್ತಿಯ ವಿಚಾರದಲ್ಲಿ ಅವ್ಯವಹಾರವಾಗಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಸಹಕಾರ ಇಲಾಖೆ, ಸರಕಾರದ ಮೇಲೆ ಒತ್ತಡ ಹೇರುವಂತೆ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಲಾಯಿತು.
ಶಂಕರನಾರಾಯಣ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸುಧಾಕರ ಕುಲಾಲ್, ಶಂಕರನಾರಾಯಣ ಗ್ರಾ.ಪಂ., ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿ ಕಲ್ಗದ್ದೆ ,ರವಿ ಕುಲಾಲ್ ,ನಿರ್ದೇಶಕರು ಉಪಸ್ಥಿತರಿದ್ದರು.
.











