ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಉಡುಪಿ ಜಿಲ್ಲಾ ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಜ್ಯೋತಿ ಹೆಬ್ಬಾರ್ ಇವರ ಪದಗ್ರಹಣ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಇತ್ತೀಚಿಗೆ ಕೋಟ ಬ್ಲಾಕ್ ಕಾಂಗ್ರೆಸ್ ಇಂದಿರಾ ಭವನ ಕಚೇರಿನಲ್ಲಿ ಜರಗಿತು.
ಸಭೆಯಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಎ ಕುಂದರ್, ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ , ಕೋಟ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರೇಖಾ ಪಿ ಸುವರ್ಣ , ಉಡುಪಿ ಜಿಲ್ಲಾ ಪ್ರಮುಖ ಮಹಿಳಾ ಕಾಂಗ್ರೆಸ್ ನಾಯಕಿಯರು ಹಾಗೂ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಮಹಿಳಾ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.











