ವಕ್ವಾಡಿ 32ನೇ ಸಾರ್ವಜನಿಕ ಗಣೇಶೋತ್ಸವದ ಅಧ್ಯಕ್ಷರಾಗಿ ಕಲಾವಿದ ಗಿರೀಶ್ ಆಚಾರ್ ಹಾಗೂ ಕಾರ್ಯದರ್ಶಿಯಾಗಿ ಕೃಷ್ಣ ಶೆಟ್ಟಿಗಾರ್ ಆಯ್ಕೆ

0
94

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ವಕ್ವಾಡಿ ಸಾರ್ವಜನಿಕ ಗಣೇಶೋತ್ಸವದ 32ನೇ ಸಾಲಿನ ಅಧ್ಯಕ್ಷರಾಗಿ ಕಲಾವಿದ ಗಿರೀಶ್ ಆಚಾರ್ ವಕ್ವಾಡಿ ಹಾಗೂ ಕಾರ್ಯದರ್ಶಿಯಾಗಿ ವಕ್ವಾಡಿ ಫ್ರೆಂಡ್ಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.

ಇತ್ತೀಚಿಗಷ್ಟೇ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ವಕ್ವಾಡಿ ಮಹಾಲಿಂಗೇಶ್ವರ ಸನ್ನಿದಾನದಲ್ಲಿ ಕಳೆದ 32 ವರ್ಷಗಳಿಂದ ಸಾಗಿ ಬರುತ್ತಿರುವ ಗಣೇಶೋತ್ಸವವು ಅನೇಕ ಧಾರ್ಮಿಕ ವಿಧಿ ವಿಧಾನ ಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತದೆ.

Click Here

ಇತ್ತೀಚಿಗೆ ಗಣೇಶೋತ್ಸವ ಸಮಿತಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಬಾರಿ ಅಧ್ಯಕ್ಷರಾಗಿ ಚಿತ್ರಕಲಾ ಶಿಕ್ಷಕ ಗಿರೀಶ್ ಆಚಾರ್ ಆಯ್ಕೆಯಾಗಿದ್ದು ,ಇವರು ಚಿತ್ರ ಕಲಾ ತರಗತಿಗಳನ್ನು ನಡೆಸುತ್ತಿದ್ದಾರೆ ಹಾಗೂ ಅನೇಕ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

Click Here

LEAVE A REPLY

Please enter your comment!
Please enter your name here