ಆಸಾಡಿ ಒಡ್ರ್: ಸಾಧಕ ಪುರಸ್ಕಾರಕ್ಕೆ ಸಾಂಸ್ಕೃತಿಕ ಚಿಂತಕಿ ಭಾರತಿ ವಿ. ಮೈಯ್ಯ ಆಯ್ಕೆ

0
480

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ನಾಲ್ಕನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಲ್ಪಟ್ಟ ಮಣೂರು ಭಾರತಿ ವಿಷ್ಣುಮೂರ್ತಿ ಮೈಯ್ಯ ಆಯ್ಕೆಗೊಳಿಸಲಾಗಿದೆ.

ಅಗಸ್ಟ್ 10ರ ಭಾನುವಾರ ಬೆಳಿಗ್ಗೆ 9ರಿಂದ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್” ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಿದೆ.

Click Here

ವಿಶೇಷ ಆಹ್ವಾನಿತರಾಗಿ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಕುಂದಗನ್ನಡ ರವಿ ಬಸ್ರೂರು ಹಾಗೂ ಕುಂದಗನ್ನಡದ ಲೇಖಕಿ ಪೂರ್ಣಿಮಾ ಕಮಲಶಿಲೆ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ ,ಸ್ಪರ್ಧೆ, ಅನಾಥಾಶ್ರಮಕ್ಕೆ ನೆರವು, ಸ್ನೇಹಕೂಟ ಮಣೂರು ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.

ಗೆಳೆಯರ ಬಳಗ ಹಂದಟ್ಟು ,ಹಾಗೂ ಹಂದಟ್ಟು ಮಹಿಳಾ ಬಳಗ ಕೋಟ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ,ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here