ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿನ ವಿದ್ಯಾರ್ಥಿಗಳಿಗೆ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಕೊಡಮಾಡುವ ಉಚಿತ ನೋಟ್ ಪುಸ್ತಕ, ಸಮವಸ್ತ್ರ, ಬೆಲ್ಟ್ ಮತ್ತು ಹೆಚ್ಚುವರಿ ಕಲಿಕೆಗೆ ಅಗತ್ಯವಾದ ಪಠ್ಯ ಪುಸ್ತಕಗಳ ವಿತರಣೆ ಕಾರ್ಯಕ್ರಮ ಜು.14ರಂದು ಜರುಗಿತು.
ಉಚಿತ ಕೊಡುಗೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದ ಕೃಷ್ಣಮೂರ್ತಿ ಮಂಜರು, ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆದು ಸಚ್ಚಾರಿತ್ರ್ಯವಂತರಾಗಿ ಎಂದು ಶುಭಹಾರೈಸಿದರು.
ಟ್ರಸ್ಟಿನ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಮಾತನಾಡಿ, ಶಾಲೆಯ ಏಳಿಗೆಗೆ ಕೃಷ್ಣಮೂರ್ತಿ ಮಂಜರ ಕೊಡುಗೆಗಳನ್ನು ವಿವರಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ನಾಗೇಂದ್ರ ಉಡುಪ, ಸದಸ್ಯರಾದ ಸತೀಶ್, ಆಶಾ, ಆಶಾರಾಣಿ, ಶ್ರೀಧರ್, ನಯನಾ ಮತ್ತು ಆಶಾ, ಪ್ರಭಾರ ಮುಖ್ಯ ಶಿಕ್ಷಕ ರಾಜು ಎನ್ ಉಪಸ್ಥಿತರಿದ್ದರು.
ಶಿಕ್ಷಕ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಇಂದಿರಾ ಸ್ವಾಗತಿಸಿದರು. ಶಿಕ್ಷಕಿ ಭಾರತಿ ವಂದಿಸಿದರು.











