ಕುಂದಾಪುರ :ಮೀನುಗಾರರು ಸುರಕ್ಷಿತವಾಗಿ ಮರಳಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥನೆ 

0
395

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

Click Here

ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದರು. ಮೂವರನ್ನು ಸುರಕ್ಷಿತವಾಗಿ ಕರೆ‌‌ತರಲು ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೂ ಸೂಚನೆ ನೀಡಿದರು.

ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

Click Here

LEAVE A REPLY

Please enter your comment!
Please enter your name here