ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಪುರಾಣ ಪ್ರಸಿದ್ಧ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರಿಗೆ ದೇಗುಲದ ಟ್ರಸ್ಟಿ ಚಂದ್ರ ಆಚಾರ್ ಶಾಲು ಹೋದಿಸಿ ಪ್ರಸಾದ ವಿತರಿಸಿದರು.
ದೇಗುಲದ ಪ್ರಧಾನ ಅರ್ಚಕ ಸುಬ್ರಾಯ ಜೋಗಿ, ಅರ್ಚಕರಾದ ಗಿರೀಶ್ ಜೋಗಿ, ದೇವರಾಜ್ ಜೋಗಿ, ಸ್ಥಳೀಯರಾದ ರಾಘವೇಂದ್ರ ಪೂಜಾರಿ ಮತ್ತಿತರರು ಇದ್ದರು.











