ಬಿದ್ಕಲ್‍ಕಟ್ಟೆಯಲ್ಲಿ ರಾತ್ರಿ ಮಲಗಿದ್ದ ಗೋ ಕಳವು: ಆರೋಪಿಗಳ ಬಂಧನ

0
2605

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಜು.19ರ ಬೆಳಗಿನ ಜಾವ ಬಿದ್ಕಲ್ಕಟ್ಟೆ ಪೇಟೆಯ ಬಳಿ ರಸ್ತೆ ಬದಿಯಲ್ಲಿ ಮಲಗಿದ್ದ ಒಂದು ಹಸುವನ್ನು ಹಿಡಿದು ಅದಕ್ಕೆ ಬಳ್ಳಿಯಿಂದ ಕುತ್ತಿಗೆಗೆ ಬಿಗಿದು ಅದನ್ನು ಹಿಂಸಾತ್ಮಕವಾಗಿ ಎಳೆದು ವಾಹನಕ್ಕೆ ತುಂಬಿಸಿ ಕಳವು ಮಾಡಿಕೊಂಡು ಹೋದ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿತರಾದ ಇಮ್ರಾನ್ @ ಕುಟ್ಟು ಹಾಗೂ ಇರ್ಷಾದ್ ರನ್ನು ದಸ್ತಗಿರಿ ಮಾಡಲಾಗಿದೆ.

Click Here

ಈ ಪ್ರಕರಣದ ಪತ್ತೆ ಕಾರ್ಯವನ್ನು ಕೈಗೊಂಡ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ನೇತೃತ್ವದಲ್ಲಿ ಕೋಟಾ ಪೆÇಲೀಸ್ ಠಾಣೆಯ ಪೆÇಲೀಸ್ ಉಪನಿರೀಕ್ಷಕ ರಾಘವೇಂದ್ರ ಸಿ ಮತ್ತು ಸಿಬ್ಬಂದಿಯವರಾದ ಶ್ರೀಧರ್, ರಾಘವೇಂದ್ರ ಅವರನ್ನೊಳಗೊಂಡ ತಂಡ ಕಳ್ಳತನ ಮಾಡಿದ ಆರೋಪಿತರಾದ ಇಮ್ರಾನ್ @ ಕುಟ್ಟು ಹಾಗೂ ಇರ್ಷಾದ್ ರವರನ್ನು ದಸ್ತಗಿರಿ ಮಾಡಿ ಕೃತ್ಯಕ್ಕೆ ಬಳಸಿದ ಕೆಎ 12 ಎನ್ 5122 ನಂಬರಿನ ಮಹೇಂದ್ರ ಸ್ಕಾರ್ಪಿಯೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ದಸ್ತಗಿರಿಯಾಗಿರುವ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕು ಪುದು ಗ್ರಾಮದ ಇಮ್ರಾನ್ @ ಕುಟ್ಟು (31) ಈತನ ಮೇಲೆ ಉಡುಪಿ ಜಿಲ್ಲೆಯ ಈ ಪ್ರಕರಣವನ್ನು ಸೇರಿದಂತೆ, ದಕ್ಷಿಣ ಕನ್ನಡ, ಕೊಡಗು, ಹಾಸನ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಒಟ್ಟು 35 ಪ್ರಕರಣಗಳು ದಾಖಲಾಗಿದೆ.

ಇನ್ನೋರ್ವ ಆರೋಪಿ ದ.ಕ ಜಿಲ್ಲೆಯ ಮಂಗಳೂರು ತಾಲೂಕು ಗಂಜಿಮಠ ಅಜದ್ ನಗರದ ನಿವಾಸಿ ಇರ್ಷಾದ್ (30), ಈತನ ಮೇಲೆ ಉಡುಪಿ ಜಿಲ್ಲೆಯ ಈ ಪ್ರಕರಣವನ್ನು ಸೇರಿದಂತೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಒಟ್ಟು 14 ಪ್ರಕರಣಗಳು ದಾಖಲಾಗಿದೆ.

Click Here

LEAVE A REPLY

Please enter your comment!
Please enter your name here