ಸಿದ್ದಾಪುರ: ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ ಕಾರ್ಗಿಲ್ ವಿಜಯದಿವಸ ಆಚರಣೆ

0
185

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಸಿದ್ಧಾಪುರ ಜ್ಞಾನಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯದಿವಸ ಕಾರ್ಯಕ್ತಮವನ್ನು ಆಚರಿಸಲಾಯಿತು.

ಈ ಸಂದರ್ಭ ವಾಯುಸೇನಾ ಪಡೆಯಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕರಾದ ಅನಂತಕೃಷ್ಣ ಎಂ. ಎಂ. ಹಾಗೂ ಡಿ ಆರ್ ಡಿ ಓ ಸೇರಿದಂತೆ ವಿವಿಧ ರಾಷ್ಟ್ರ ರಕ್ಷಣಾ ಯೋಜನೆಗಳಲ್ಲಿ ಸೇವೆ ಸಲ್ಲಿಸಿರುವ ಸುರೇಶ್ ಶೆಟ್ಟಿ ಯವರನ್ನು ಸನ್ಮಾನಿಸಲಾಯಿತು.

ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅನಂತಕೃಷ್ಣ ಎಂ.ಎಂ ಅವರು, ಪ್ರತಿಯೊಬ್ಬ ಭಾರತೀಯನೂ ದೇಶಪ್ತೇಮವನ್ನು ಮೈಗೂಡಿಸಿಕೊಳ್ಳಬೇಕು. ಭಾರತದ‌ ಭದ್ರತೆಗೆ ವಾಯುಸೇನೆ, ನೌಕಾ ಸೇನೆ ಹಾಗೂ ಭೂಸೆರನೆಗಳು ಹಗಲಿರುಳು ದುಡಿಯುತ್ತವೆ ಎಂದರು. ಭಾರತೀಯ ಸೇನೆಯ ಕಾರ್ಯವಿಧಾನಗಳನ್ನು ವಿವರಿಸಿದರು.

Click Here

ಮತ್ತೋರ್ವ ಯೋಧರಾದ ಸುರೇಶ್ ಶೆಟ್ಟಿ ಮಾತನಾಡಿ, ಸೇನಾ ಕಾರ್ಯಾಚರಣೆಗಳಲ್ಲಿ ತಂತ್ರಜ್ಞಾನದ ಬಳಕೆಯ ಕುರಿತು ಮಾಹಿತಿ ನೀಡಿದರು.

ಸುಮುಖ ಎಜ್ಯುಕೇಶನ್ ಟ್ರಸ್ಟ್ ಸಿದ್ಧಾಪುರ ಇದರ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶ ಕಾಯುವ ಯೋಧರ ಮಹತ್ವವನ್ನು ಯುವ ಜನತೆ ಅರ್ಥೈಸಿಕೊಳ್ಳಬೇಕು ಎಂದರು.

ಸುಮುಖ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಯು. ಪಾಂಡುರಂಗ ಪಡಿಯಾರ್, ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೇಗ್ಡೆ ಹಾಗೂ ಸರಸ್ವತಿ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ಶ್ವೇತಾ ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಹರ್ಷ ಶೆಟ್ಟಿ ವಂದಿಸಿದರು. ಕನ್ನಡ ಉಪನ್ಯಾಸಕರ ನಾಗರಾಜ್ ಗುಳ್ಳಾಡಿ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here