ಕುಂದಾಪುರ ಮಿರರ್ ಸುದ್ದಿ…




ಕುಂದಾಪುರ : ತಾಲೂಕು ಕಾನೂನು ಸೇವೆಗಳ ಸಮಿತಿ, ಕುಂದಾಪುರ ಬಾರ್ ಅಸೋಸಿಯೇಶನ್, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಪೊಲೀಸ್ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಅರಿವು ಹಾಗೂ ಮಾಹಿತಿ ಕಾರ್ಯಾಗಾರ ಕುಂದಾಪುರದ ಗಿಳಿಯಾರ್ ಕುಶಲ ಹೆಗ್ಡೆ ರೋಟರಿ ಸಭಾ ಭವನದಲ್ಲಿ ಬುಧವಾರ ನಡೆಯಿತು.
ಕುಂದಾಪುರದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಮಂಜುಳಾ ಬಿ. ಕಾರ್ಯಾಗಾರ ಉದ್ಘಾಟಿಸಿದರು. ಕುಂದಾಪುರ ಪೊಲೀಸ್ ಉಪವಿಭಾಗದ ಡಿವೈಎಸ್‍ಪಿ ಎಚ್.ಡಿ.ಕುಲಕರ್ಣಿ, ಕುಂದಾಪುರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿ, ಸಹಾಯಕ ಸರಕಾರಿ ಅಭಿಯೋಜಕ ಉದಯ ಕುಮಾರ್ ಶೆಟ್ಟಿ, ಕುಂದಾಪುರ ಪೊಲೀಸ್ ವೃತ್ತನಿರೀಕ್ಷಕ ಜಯರಾಮ್ ಗೌಡ, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್ ನಾಯಕ್, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಾಸುದೇವ ಮತ್ತಿತರರು ಉಪಸ್ಥಿತರಿದ್ದರು. ವಕೀಲ ಮಂಜುನಾಥ ಅರಾಟೆ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.











