ಕುಂದಾಪುರ ಮಿರರ್ ಸುದ್ದಿ…
ಕಿರಿಮಂಜೇಶ್ವರ: ಜುಲೈ29 ರಂದು ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಉಪ್ಪುಂದ ಇವರ ಸಹಯೋಗದೊಂದಿಗೆ ನಡೆದ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ 17ರ ವಯೋಮಿತಿಯ ವಿಭಾಗದ ಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಇಶಾನ್ವಿ ಎ ಮೊಗವೀರ (9ನೇ ತರಗತಿ) ಪ್ರಥಮ ಸ್ಥಾನ ಹಾಗೂ 14ರ ವಯೋಮಾನದ ವಿಭಾಗದಲ್ಲಿ ಸಮೃದ್ಧಿ ಶೆಟ್ಟಿ(9ನೇ ತರಗತಿ) ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದನೆ ಯನ್ನು ಸಲ್ಲಿಸಿದ್ದಾರೆ.











