ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಕೋಟ ಪಡುಕರೆಯಲ್ಲಿ ಸುದೀರ್ಘ ಹನ್ನೊಂದು ವರ್ಷಗಳ ಕಾಲ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸಾರ್ಥಕ ಸೇವೆ ಸಲ್ಲಿಸಿ ಇದೀಗ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿಗೆ ವರ್ಗಾವಣೆಗೊಂಡಿರುವ ಡಾ. ಮನೋಜ್ ಕುಮಾರ್ ಎಂ. ಇವರಿಗೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ, ಕಾಲೇಜಿನ ಸಮಸ್ತ ಉಪನ್ಯಾಸಕರು ,ಸಿಬ್ಬಂದಿ ವರ್ಗದ ಹಾಗೂ ವಿದ್ಯಾರ್ಥಿಗಳ ವತಿಯಿಂದ ವತಿಯಿಂದ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಆಗಸ್ಟ್ 2 ರಂದು ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನುಕಾಲೇಜಿನ ಪ್ರಾಂಶುಪಾಲರಾದ ಡಾ .ರಾಜೇಂದ್ರ ಎಸ್. ನಾಯಕ್ ವಹಿಸಿದ್ದರು.
ಈ ಸಂದರ್ಭ ನಿಕಟಪೂರ್ವ ಪ್ರಾಂಶುಪಾಲರಾದ ಡಾ.ಸುನೀತಾ ವಿ, ಅಧ್ಯಾಪಕ ಕಾರ್ಯದರ್ಶಿ ಡಾ. ಶಂಕರ್ ನಾಯ್ಕ್, ಐಕ್ಯೂಎಸಿ ಸಂಚಾಲಕರಾದ ಡಾ.ಸುಬ್ರಹ್ಮಣ್ಯ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಮೇಶ್ ಆಚಾರ್ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದಿನ ಕೋಡಿ, ಕಾರ್ಯದರ್ಶಿ ಪ್ರಸಾದ್ ಬಿಲ್ಲವ, ಕೋಶಾಧಿಕಾರಿ ಪವನ್ ಕುಂದರ್, ಗೌರವಸಲಹೆಗಾರ ಹಾಗೂ ಕೋಟ ಸಿ.ಎ ಬ್ಯಾಂಕ್ ನಿರ್ದೇಶಕ ರಂಜಿತ್ ಕುಮಾರ್ ಬಾರಿಕೆರೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಪೂಜಾರಿ ಉಪಸ್ಥಿತರಿದ್ದರು.
ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.











