ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇತ್ತೀಚಿಗೆ ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸನಲ್ಲಿ ಚಿನ್ನದ ಪದಕ ವಿಜೇತರಾದ ಕೋಟದ ದಿನೇಶ್ ಗಾಣಿಗ ಇವರಿಗೆ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ, ಜ್ಞಾಹ್ನವಿ ಹೇರ್ಳೆ, ಪಂಚವರ್ಣ ಯುವಕಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸಂಚಾಲಕಿ ಸುಜಾತ ಬಾಯರಿ ಇದ್ದರು.











