ಕರಾಟೆ ಸ್ಪರ್ಧೆಯಲ್ಲಿ ಸಾಧನೆ ಮೆರೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದ ವಿದ್ಯಾರ್ಥಿಗಳು

0
1506

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕಿರಿಮಂಜೇಶ್ವರ: ಜುಲೈ 31ರಂದು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸ.ಹಿ.ಪ್ರಾ ಶಾಲೆ ಬಿಜೂರು ಇಲ್ಲಿ ನಡೆದ ಬೈಂದೂರು ವಲಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 14ರ ವಯೋಮಾನದ ಹುಡುಗರ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳಾದ ಆದಿತ್ಯ(8ನೇ ತರಗತಿ ), ಸಾಕ್ಷಿತ್(7ನೇ ತರಗತಿ), ಪ್ರೀತಮ್( ನೇತರಗತಿ),
ರಜತ್( ನೇ ತರಗತಿ), ಅನ್ವೇಷ(8ನೇ ತರಗತಿ) ಮತ್ತು ಹರಿಜಿತ್(8ನೇ ತರಗತಿ)ಪ್ರಥಮ ಸ್ಥಾನವನ್ನು ಹಾಗೂ ಶ್ರೀಶಾಂತ(8ನೇ ತರಗತಿ) ದ್ವಿತೀಯ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

14ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಸನ್ಮಿತಾ(8ನೇತರಗತಿ) ಪ್ರಥಮ ಸ್ಥಾನ ಮತ್ತು ಶ್ರೇಯಾ(7ನೇ ತರಗತಿ) ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Click Here

17ರ ವಯೋಮಾನದ ಹುಡುಗರ ವಿಭಾಗದಲ್ಲಿ ಪ್ರಸಾದ್(9ನೇ ತರಗತಿ), ಪ್ರವೀಶ್(9ನೇ ತರಗತಿ), ಗೌರವ್(9ನೇ ತರಗತಿ), ಸಾಯಿನಾಥ್(9ನೇ ತರಗತಿ), ಸೋಹನ್( ನೇ ತರಗತಿ), ಸುಶಾಂತ್( ನೇ ತರಗತಿ) ಮತ್ತು ರಿತೇಶ್( ನೇ ತರಗತಿ) ಪ್ರಥಮ ಸ್ಥಾನವನ್ನು, ರಿತ್ವಿಕ್(9ನೇ ತರಗತಿ) ದ್ವಿತೀಯ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಮಿನಲ್(9ನೇ ತರಗತಿ) ಮತ್ತು ಶರಣ್ಯ(9ನೇ ತರಗತಿ) ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ,ಮುಖ್ಯ ಶಿಕ್ಷಕಿ ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here