ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಸ. ಹಿ. ಪ್ರಾಥಮಿಕ ಶಾಲೆ ಗುಜ್ಜಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹೆಮ್ಮಾಡಿ ಹೋಬಳಿ ಮಟ್ಟದ 14ರ ವಯೋಮಾನದ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕ ಮತ್ತು ಬಾಲಕಿಯರ ಎರಡು ವಿಭಾಗದಲ್ಲಿ ಉಪ್ಪಿನಕುದ್ರುವಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನಿಯಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕವೃಂದ ,ಎಸ್.ಡಿ.ಎಂ.ಸಿ ಹಾಗೂ ಶಾಲಾ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.











