ಕುಂದಾಪುರ ಮಿರರ್ ಸುದ್ದಿ…
ಬೈಂದೂರು :ಶಿವಮೊಗ್ಗ ಲೋಕಸಭಾ ಸಂಸದರಾದ ಬಿ.ವೈ ರಾಘವೇಂದ್ರರವರು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌವಾಣ್ ಇವರನ್ನು ಭೇಟಿಯಾಗಿ ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ಕೆಲವು ತಾಲ್ಲೂಕುಗಳು ಭೌಗೋಳಿಕವಾಗಿ ಮಲೆನಾಡು ಮತ್ತು ಅರೆ ಮಲೆನಾಡು ಪ್ರದೇಶಗಳಾಗಿದ್ದು, ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಮಲೆನಾಡು ಭಾಗದ ಗ್ರಾಮೀಣ ಪ್ರದೇಶದ ರಸ್ತೆಗಳು ಹಾಳಾಗಿದ್ದು, ಒಟ್ಟು 341 ಕಿಲೋ ಮೀಟರ್ ರಸ್ತೆಗಳಿಗೆ ಮರು ಡಾಂಬರೀಕರಣ ಮಾಡಲು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆಯನ್ನು ಸಲ್ಲಿಸಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿಕೆ ಸಲ್ಲಿಸಿದರು.











