ಆ.10 ರಂದು ಹಂದಟ್ಟಿನಲ್ಲಿ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಆಸಾಡಿ ಒಡ್ರ್ ಕಾರ್ಯಕ್ರಮ

0
342

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಕೋಟದ ಪಂಚವರ್ಣ ಮಹಿಳಾ ಮಂಡದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಕೋಟ ಇದರ ಮಾರ್ಗದರ್ಶನದಲ್ಲಿ ಪ್ರತಿವರ್ಷ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಸಲ್ಪಡುವ ಆಸಾಡಿ ಒಡ್ರ್ -2025 ಕಾರ್ಯಕ್ರಮ ಆ.10 ರ ಪೂರ್ವಾಹ್ನ 9 ಗಂಟೆಗೆ ನಡೆಯಲಿದೆ. ಈ ಪ್ರಯುಕ್ತ ಕೋಟದ ಸಾಂಸ್ಕೃತಿಕ ಚಿಂತಕಿ ಭಾರತಿ ವಿ ಮಯ್ಯ ಇವರಿಗೆ ಆಸಾಡಿ ಒಡ್ರ್ ಸಾಧಕ ಪುರಸ್ಕಾರ ನೀಡಿ ಗೌರವಿಸಲಿದೆ.
ವಿಶೇಷ ಆಹ್ವಾನಿತರಾಗಿ ಕುಂದಗನ್ನಡದ ರಾಯಬಾರಿ, ಕೆ‌.ಜಿ.ಎಫ್ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರ್ ಭಾಗವಹಿಸಲಿದ್ದಾರೆ.

Click Here

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಉದ್ಘಾಟಿಸಲಿದ್ದು, ಲೇಖಕಿ ಪೂರ್ಣಿಮಾ ಕಮಲಶಿಲೆ ಇವರಿಂದ ಕುಂದಗನ್ನದ ಗಮ್ಜಲ್,ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸ್ನೇಹಕೂಟ ಮಣೂರು ಇವರಿಂದ ನೃತ್ಯ ಸಿಂಚನ ಕಾರ್ಯಕ್ರಮ ಜರಗಲಿದೆ.

ಸಭೆಯಲ್ಲಿ ಹಂದಟ್ಟು ಮಹಿಳಾ ಬಳಗದ ವತಿಯಿಂದ ಹೊಸಬದುಕು ಆಶ್ರಮಕ್ಕೆ ದಿನಸಿ ಪರಿಕರ ನೀಡಲಿದೆ. ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರಗಲಿದೆ. ಕಾರ್ಯಕ್ರಮದಲ್ಲಿ ಗ್ರಾಮೀಣ ತಿನಿಸು, ಪರಿಕರಗಳ ಸ್ಪರ್ಧೆ ನಡೆಯಲಿದೆ ಎಂದು ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here