ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ: ಜನತಾ ಪಿಯು ಕಾಲೇಜು ಹೆಮ್ಮಾಡಿಯಲ್ಲಿ ಶನಿವಾರ ಪೋಷಕರ ಸಭೆ ಆಯೋಜಿಸಲಾಯಿತು. ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿ ಕಲಿಕೆಯಲ್ಲಿ ಪೋಷಕರ ಪಾತ್ರದ ಕುರಿತು ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿರುವ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಾರ್ಷಿಕ ಯೋಜನೆಯ ಕುರಿತು ಹಾಗೂ ಕಾಲೇಜಿನ ನಿಯಮಗಳ ಕುರಿತು ಮಾತನಾಡಿದರು.
ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿ ವಂದಿಸಿದರು.











