ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಹಳೆ ವಿದ್ಯಾರ್ಥಿ ಸಂಘದ ರಚನೆ ರವಿವಾರ ಶಾಲೆಯ ಸುಬ್ರಮಣ್ಯ ಮಂಜರ ಸಭಾಭವನದಲ್ಲಿ ಜರುಗಿತು.
ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಸಂಜೀವ ಪೂಜಾರಿ ವಂಡ್ಸೆ ಆಯ್ಕೆಯಾದರು.
ಗೌರವ ಅಧ್ಯಕ್ಷರಾಗಿ ವಂಡಬಳ್ಳಿ ಜಯರಾಮ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಹಮ್ಮದ್ ರಫೀಕ್ ಸಾಹೇಬ್, ಕಾರ್ಯದರ್ಶಿಯಾಗಿ ಸೋಮರಾಯ ಜನ್ನು (ಪ್ರಭಾರ ಮುಖ್ಯೋಪಾಧ್ಯಾಯರು), ಜೊತೆ ಕಾರ್ಯದರ್ಶಿಯಾಗಿ ವಸಂತರಾಜ್ ಶೆಟ್ಟಿ, ಖಜಾಂಚಿಯಾಗಿ ನಾಗರಾಜ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ ಮೆಂಡನ್, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಗುಂಡು ಪೂಜಾರಿ, ಕ್ರೀಡಾಕಾರ್ಯದರ್ಶಿಯಾಗಿ ಚಂದ್ರ ಬಿಲ್ಲವ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಗುರುರಾಜ್ ಆಯ್ಕೆಯಾದರು.
ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಉದಯ ಕುಮಾರ್ ಶೆಟ್ಟಿ, ದೇವು ಮೆಂಡನ್, ಶಂಕರ ಆಚಾರ್ಯ, ಪ್ರಸಾದ್ ಆಚಾರ್ಯ, ರಾಜೀವ ನಾಯ್ಕ, ಪ್ರತಾಪ ಕುಮಾರ್ ಶೆಟ್ಟಿ, ಮೊಹಮ್ಮದ್ ಫಾರೂಕ್, ಸುಮತಿ, ಜಯರಾಮ ಶೆಟ್ಟಿ ಬೆಳ್ವಾಣ, ಅಭಿಷೇಕ್ ಮೆಂಡನ್ ಆಯ್ಕೆಯಾದರು.
ಈ ಸಂದರ್ಭದಲ್ಲಿ ಎಸ್,ಡಿ.ಎಂ.ಸಿ ಅಧ್ಯಕ್ಷೆ ಡಾ. ಪೂರ್ಣಿಮಾ ಹಾಗೂ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ಕಾರ್ಯಕ್ರಮ ನಿರ್ವಹಿಸಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಂಜೀವ ಪೂಜಾರಿ ಅವರು ಶೈಕ್ಷಣಿಕ ಕಳಕಳಿಯಿಂದ ಶಾಲೆಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ. ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.











