ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಾಲಿಗ್ರಾಮ ಕಯಾಕಿಂಗ್ ತಂಡ ರಾಷ್ಟ್ರ ಪ್ರೇಮವನ್ನು ಬಿತ್ತುವ ಸಲುವಾಗಿ ಪ್ರತಿ ವರ್ಷದಂತೆ ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಂಡು ವಿಭಿನ್ನವಾಗಿ ರಾಷ್ಟ್ರ ಪ್ರೇಮವನ್ನು ಮೆರೆಯುವ ಪ್ರಯತ್ನ ಮಾಡಿತು. ಸೀತಾ ನದಿಯಲ್ಲಿ ಕಯಕಿಂಗ್ ಮೂಲಕ ಪ್ರಕೃತಿ ಜಾಗೃತಿ ಮೂಡಿಸಿದ ಸಾಲಿಗ್ರಾಮ ಕಯಾಕಿಂಗ್ ಸ್ವಾತಂತ್ಯೋತ್ಸವನ್ನು ಅರ್ಥಪೂರ್ಣಗೊಳಿಸಿತು.
ಈ ಹಿನ್ನಲ್ಲೆಯಲ್ಲಿ ಸೀತಾ ನದಿಯ ಮದ್ಯದಲ್ಲಿ ಕಯಾಕಿಂಗ್ ಮೂಲಕ ತೆರಳಿ ಅಲ್ಲಿ ಧ್ವಜ ಸ್ತಂಭ ನೆಟ್ಟು ಧ್ವಜಾರೋಹಣ ನೆರವೆರಿಸಿತು.
ಸಾಲಿಗ್ರಾಮ ಕಯಾಕಿಂಗ್ ನ ಮುಖ್ಯಸ್ಥರಾದ ಮಿಥುನ್ ಕುಮಾರ್ ಮೆಂಡನ್, ಲೋಕೇಶ್ ಮತ್ತಿತರು ಉಪಸ್ಥಿತರಿದ್ದರು .











