ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸೈಂಟ್ ಫ್ರಾನ್ಸಿಸ್ ಕ್ಷೀವಿಯರ್ ಆಂಗ್ಲ ಮಾಧ್ಯಮ ಶಾಲೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ, ಅಂಪಾರು ಇಲ್ಲಿನ ಓರ್ವ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
14 ವಯೋಮಾನದ ಬಾಲಕರ 25 ಕೆ.ಜಿ ವಿಭಾಗದಲ್ಲಿ 8ನೇ ತರಗತಿಯ ಪ್ರೀತೇಶ್ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ವಿಜಯಶಾಲಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಅಭೂತಪೂರ್ವ ಸಾಧನೆಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಗಾಯತ್ರಿ ಮತ್ತು ಕರಾಟೆ ತರಬೇತುದಾರರಾದ ಅಫ್ಜಲ್ ಇವರು ಮಾರ್ಗದರ್ಶನ ನೀಡಿದ್ದರು. ಇದೇ ವೇಳೆ, ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿಗಳಾದ ನವೀನ್ ಕುಮಾರ್ ಶೆಟ್ಟಿ, ಖಜಾಂಚಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಹಾಗೂ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಇವರು ವಿಜೇತರನ್ನು ಅಭಿನಂದಿಸಿದರು. ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥೆಗಳಾದ ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಸಂಜಯಗಾಂಧಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಉತ್ತಮ ಪ್ರದರ್ಶನದ ಬಗ್ಗೆ ಸಂತಸ ವ್ಯಕ್ತಪಡಿಸಿದರು.











