ಪಂಚವರ್ಣದಿಂದ 268ನೇ ಹಸಿರುಜೀವ ಸಮರ್ಪಣಾ ಅಭಿಯಾನ |ಸಂತೋಷ್ ಮೇಷ್ಟ್ರು ಅವರ ಜೀವನ ಮಾದರಿ – ಸತೀಶ್ ಹೆಚ್ ಕುಂದರ್

0
499

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಓರ್ವ ವ್ಯಕ್ತಿ ಸಾಮಾಜಿಕ ಚಟುವಟಿಕೆಯ ಮೂಲಕ ಈ ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡಿ ಅತಿ ಚಿಕ್ಕ ಸಮಯದಲ್ಲಿ ಜನಸಾಮಾನ್ಯರ ಮನಸ್ಸನ್ನು ಗೆದ್ದಿದ್ದಾರೆ ಎಂದು ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಹೇಳಿದರು.

ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ, ಇಂಡಿಕಾ ಕಲಾ ಬಳಗ ಪಡುಕರೆ ಇವರ ಸಹಯೋಗದೊಂದಿಗೆ 268ನೇ ಭಾನುವಾರದ ಪರಿಸರಸ್ನೇಹಿ ಹಸಿರುಜೀವ ಕಾರ್ಯಕ್ರಮವನ್ನು ಇತ್ತೀಚಿಗೆ ನಿಧನರಾದ ಸಂಘದ ಸದಸ್ಯ ಸಂತೋಷ್ ಮೇಷ್ಟ್ರಿಗೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿ ಪಂಚವರ್ಣ ಸಂಘಟನೆ ನಿರಂತರ ನಡೆಸುವ ಪರಿಸರ ಸ್ನೇಹಿ ಕಾರ್ಯಕ್ರಮವನ್ನು ಓರ್ವ ಸದಸ್ಯನಿಗೆ ಸಮರ್ಪಿಸಿದ ರೀತಿ ನಿಜಕ್ಕೂ ಶ್ಲಾಘನೀಯ ಎಂದರು‌.

Click Here

ಈ ಸಂದರ್ಭದಲ್ಲಿ ಕೋಟ ರಾಷ್ಟ್ರೀಯ ಹೆದ್ದಾರಿ ಹಲವು ಭಾಗಗಳಲ್ಲಿ ಗಿಡ ನೆಡಲಾಯಿತ್ತಲ್ಲದೆ, ನೆಟ್ಟ ಗಿಡಗಳ ಆರೈಕೆಯ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತು.

ಕೋಟ ಗ್ರಾಮಪಂಚಾಯತ್ ಸದಸ್ಯ ಅಜಿತ್ ದೇವಾಡಿಗ, ಪಂಚವರ್ಣದ ಉಪಾಧ್ಯಕ್ಷರಾದ ದಿನೇಶ್ ಆಚಾರ್, ಸಂತೋಷ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಜೆಸಿಐ ಕೋಟ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಇಂಡಿಕಾ ಕಲಾ ಬಳಗ ಪಡುಕರೆ ಇದರ ಪ್ರಭಾಕರ್, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಇದ್ದರು.

ಕಾರ್ಯಕ್ರಮವನ್ನು ಸಲಹಾ ಸಮಿತಿಯ ರವೀಂದ್ರ ಕೋಟ ಸಂಯೋಜಿಸಿದರು. ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ, ಸಮುದ್ಯತಾ ಕೋಟ ಗಿಡ ನೀಡಿ ಸಹಕರಿಸಿತು.

Click Here

LEAVE A REPLY

Please enter your comment!
Please enter your name here